ಬೆಳಗಾವಿ: ಭಾರತೀಯ ಜನತಾ ಪಾರ್ಟಿ ಪ್ರಶಿಕ್ಷಣ ಪ್ರಕೋಷ್ಠ ಬೆಳಗಾವಿ ಮಹಾನಗರ ಮತ್ತು ಬೆಳಗಾವಿ ಗ್ರಾಮಾಂತರ ಜಿಲ್ಲೆ ಹಾಗೂ ಚಿಕ್ಕೋಡಿ ಜಿಲ್ಲೆಗಳ ವಿಷಯ ಪ್ರಮುಖರ ಪ್ರಶಿಕ್ಷಣ ವರ್ಗ ಸಭೆ ಇಂದು ನಗರದ ಧರ್ಮನಾಥ ಭವನದಲ್ಲಿ ನಡೆಯಿತು. ಸಭೆಯ ಉದ್ಘಾಟನೆಯನ್ನು ಭಾರತ ಮಾತೆಯ ಹಾಗೂ ಬಿಜೆಪಿ ಸಂಸ್ಥಾಪಕರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ದೀಪಪ್ರಜ್ವಲನೆ ಮುಖಾಂತರ ಪ್ರಾರಂಭಿಸಿದರು.

ಸಭೆಯ ಅಧ್ಯಕ್ಷತೆಯನ್ನು ಬಿಜೆಪಿ ಬೆಳಗಾವಿ ಮಹಾನಗರ ಜಿಲ್ಲಾ ಅಧ್ಯಕ್ಷ ಶಶಿಕಾಂತ ಆರ್ ಪಾಟೀಲ ವಹಿಸಿದ್ದರು. ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾದ ಸಂಜಯ ಪಾಟೀಲ ಪ್ರಸ್ತಾವಿಕವಾಗಿ ಭಾಷಣವನ್ನು ಮಾಡಿದರು.

ರಾಜ್ಯ ಸಭಾ ಸದಸ್ಯರಾದ ಈರಣ್ಣಾ ಕಡಾಡಿ ಉದ್ಘಾಟನಾ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ, ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ

ಚಿಕ್ಕೋಡಿ ಜಿಲ್ಲಾ ಅಧ್ಯಕ್ಷ ಡಾ ರಾಜೇಶ್ ನಿರಲಿ, ಜಗದೀಶ ಕವಟಗಿಮಠ, ಎಮ್ ಬಿ ಜಿರಲಿ, ಉಜ್ವಲಾ ಬಡವನಾಚೆ, ರಾಜೇಂದ್ರ ಹರಕುಣಿ ಹಾಗೂ ಭಾರತೀಯ ಜನತಾ ಪಾರ್ಟಿ ಹಿರಿಯ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.