ಮಾಜಿ ಸಚಿವ ವಿನಯ್ ಕುಲಕರ್ಣಿಯನ್ನು ವಶಕ್ಕೆ ಪಡೆದ ಸಿಬಿಐ ಅಧಿಕಾರಿಗಳು

  • 30 Dec 2023 , 10:31 AM
  • Dharwad
  • 112

ಧಾರವಾಡ : ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗಿಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇಂದು ಮುಂಜಾನೆ ಮಾಜಿ ಸಚಿವರನ್ನು ವಶಕ್ಕೆ ಪಡೆದಿರುವ ಸಿಬಿಐ ಅಧಿಕಾರಿಗಳು ಸ್ಥಳೀಯ ಪೊಲೀಸ್ ಠಾಣೆಗೆ ಕರೆದೊಯ್ದು ತೀವ್ರ ವಿಚಾರಣೆಗೆ ನಡೆಸುತ್ತಿದ್ದಾರೆ. ಬೆಳ್ಳಂಬೆಳಗ್ಗೆ ಧಾರವಾಡದ ಬರಾಕೊಟ್ರಿಯಲ್ಲಿರುವ ಕುಲಕರ್ಣಿ ನಿವಾಸಕ್ಕೆ ಸಿಬಿಐ ಅಧಿಕಾರಿ ರಾಕೇಶ್ ರಂಜನ್ ನೇತೃತ್ವದ 6 ಮಂದಿಯ ಭೇಟಿನೀಡಿ ವಶಕ್ಕೆ ಪಡೆದುಕೊಂಡಿದ್ದಾರೆ. ಇದಕ್ಕೂ ಮುನ್ನ ಸೆಪ್ಟೆಂಬರ್ ಮಧ್ಯಭಾಗದಲ್ಲಿ ವಿನಯ್ ಕುಲಕರ್ಣಿ ಅವರ ಸಹೋದರ ವಿಜಯ್ ಕುಲಕರ್ಣಿ ಅವರನ್ನೂ ಸಿಬಿಐ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು. ಕೊಲೆಯಹಿನ್ನಲೆ : 2016 ರಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಮಾಲಕತ್ವದ ಜಿಮ್ ಬಳಿಯಲ್ಲೇ ಅವರ ಹತ್ಯೆ ನಡೆದಿತ್ತು. ಕೊಲೆ ದೃಶ್ಯ ಜಿಮ್ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು ಈ ದೃಶ್ಯಗಳನ್ನಾಧರಿಸಿ ಪೊಲೀಸರು ಮಾಜಿ ಸಚಿವ, ಸ್ಥಳೀಯ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಐವರನ್ನು ಬಂಧಿಸಿದ್ದರು. ಹೀಗಾಗಿ ಕೊಲೆಯ ಹಿಂದೆ ವಿನಯ್ ಕುಲಕರ್ಣಿ ಅವರ ಕೈವಾಡವಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆ 2019ರಲ್ಲಿ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಅವರನ್ನು ಇಂದು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

Read All News