ಬೆಳಗಾವಿ: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು 1 ದಿನದ ಮಟ್ಟಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ರೆಡ್ ಝೋನ್ ಸೆಲ್‍ನಲ್ಲಿ ಸಾಮಾನ್ಯ ಕೈದಿಯಂತೆ ರಾತ್ರಿ ಕಳೆದ ಮಾಜಿ ಸಚಿವ ಸೆಲ್‍ನಲ್ಲಿ ಟಿವಿ ಸೇರಿದಂತೆ ಯಾವುದೇ ವ್ಯವಸ್ಥೆ ಇಲ್ಲ ಒಂದು ಕಡೆ ಸೊಳ್ಳೆ ಕಾಟ ಇನ್ನೊಂದು ಕಡೆ ರಾತ್ರಿ ಊಟವನ್ನು ಮಾಡದೆ ನಿದ್ದೇನು ಮಾಡದೆ ರಾತ್ರಿಯನ್ನು ಕಳೆದರು ಎಂದು ತಿಳಿದು ಬಂದಿದೆ.