ಬೆಳಗಾವಿ: ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ಶ್ರೀ ಬನಶಂಕರಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಶಾಸಕರ ನಿಧಿಯ ವತಿಯಿಂದ ಸುಮಾರು ಹತ್ತು ಲಕ್ಷ ರೂ,ಗಳ ಪೈಕಿ ಮೊದಲ ಕಂತಿನಲ್ಲಿ ಐದು ಲಕ್ಷ ರೂ,ಗಳ ಚೆಕ್ ನ್ನು ಕಾಂಗ್ರೇಸ್ ಮುಖಂಡ ಚನ್ನರಾಜ ಹಟ್ಟಿಹೊಳಿ ಸ್ಥಳೀಯ ಜನಪ್ರತಿನಿಧಿಗಳು, ತಾಲೂಕ ಪಂಚಾಯತ್ ಅಧ್ಯಕ್ಷ ಶಂಕರಗೌಡ ಪಾಟೀಲ ಸೇರಿದಂತೆ ದೇವಸ್ಥಾನದ ಕಮೀಟಿಯವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ದೇವಸ್ಥಾನದ ಕಮೀಟಿಯವರು ಹಾಗೂ ಇತರರು ಉಪಸ್ಥಿತರಿದ್ದರು.