ಜನರಿಗೆ ಕೊಟ್ಟ ಭರವಸೆಯಂತೆ ಕೆಲಸ ಮಾಡಿ, ಡಾ.ರಾಜೇಶ ನೇರ್ಲಿ

  • 15 Jan 2024 , 1:13 AM
  • Belagavi
  • 177

ಬೆಳಗಾವಿ: ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಪಟ್ಟಣ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಬಿಜೆಪಿಯ ರವಿ ಕಾಂಬಳೆ ಮತ್ತು ಉಪಾಧ್ಯಕ್ಷರಾಗಿ ಸುರೇಖಾ ಕವಟಗೆ ಅವಿರೋಧ ಆಯ್ಕೆಯಾಗಿದ್ದಾರೆ. ನೂತನವಾಗಿ ಆಯ್ಕೆಯಾದ ಅದ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದ ಚಿಕ್ಕೋಡಿ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ರಾಜೇಶ ನೇರ್ಲಿ ಜನರಿಗೆ ಕೊಟ್ಟ ಭರವಸೆಯಂತೆ ಕೆಲಸಮಾಡಬೇಕು ಎಂದು ಹೇಳಿದರು. ಈ ಸಂಧರ್ಭದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ನಿಂಗಪ್ಪ ಕೋಖಲೆ, ಚಿಕ್ಕೊಡಿ ಜಿಲ್ಲೆ ಯುವ ಮೊರ್ಚಾ ಅಧ್ಯಕ್ಷ ದೀಪಕ್ ಪಾಟೀಲ್ , ಕಾಗವಾಡ ಮಂಡಲ ಅಧ್ಯಕ್ಷ ತಮ್ಮಣ್ಣಾ ಪಾರಶೇಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿ ಯೋಗೇಶ ಕುಂಬಾರ, ಬಿಜೆಪಿ ಧುರೀಣ ಶೀತಲ ಪಾಟೀಲ್ ಹಾಗೂ ಕಾಗವಾಡ ಮತಕ್ಷೇತ್ರದ ಬಿಜೆಪಿ ಮುಖಂಡ ಶ್ರೀನಿವಾಸ ಪಾಟೀಲ್ ಹಾಗೂ ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು, ಉಪಸ್ಥಿತರಿದ್ದರು.

Read All News