ಶಿರಾ, ಆರ್.ಆರ್.ನಗರದಲ್ಲಿ ಅರಳಿದ ಕಮಲ

  • 15 Jan 2024 , 2:50 AM
  • Bengaluru
  • 114

ಬೆಂಗಳೂರು: ಇಡೀ ರಾಜ್ಯದ ಗಮನ ಸೆಳೆದಿದ್ದ ಆರ್.ಆರ್ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕುತೂಹಲಕ್ಕೆ ಕೊನೆಗೂ ಈಗ ತೆರೆ ಬಿದ್ದಿದೆ. ಈ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳಿಗೆ ತೀವ್ರ ಮುಖಭಂಗ ಉಂಟಾಗಿದ್ದು. ಆರ್.ಆರ್. ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿರುದ್ಧ ಬಿಜೆಪಿ ಅಭ್ಯರ್ಥಿ ಮುನಿರತ್ನ ಗೆಲುವಿನ ನಗೆ ಬಿರಿದರೆ ಅತ್ತ ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯಚಂದ್ರ ಮತ್ತು ಬಿಜೆಪಿ ಅಭ್ಯರ್ಥಿ ರಾಜೇಶ್‌ಗೌಡ ನಡುವೆ ಬಿಜೆಪಿಯ ಅಭ್ಯರ್ಥಿ ರಾಜೇಶ್‌ಗೌಡ ಗೆಲುವಿನ ದಡ ಸೇರಿದ್ದಾರೆ.

Read All News