ಮೈಸೂರು: ಚಾಮರಾಜ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಕೆ.ಆರ್.ಆಸ್ಪತ್ರೆಯ ಆವರಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅನುದಾನದಡಿಯಲ್ಲಿ 48.ಲಕ್ಷ ರೂ. ಮಂಜೂರಾಗಿದ್ದು. “ಸಖಿ ಒನ್ ಸ್ಟಾಪ್ ಸೆಂಟರ್” ಎಂಬ ಕೇಂದ್ರ ಸರ್ಕಾರದ ನಿರ್ಭಯ ಯೋಜನೆಯನ್ನು ದೌರ್ಜ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಸೂರಿನಡಿಯಲ್ಲಿ ವೈದ್ಯಕೀಯ ಸೇವೆ, ಪೊಲೀಸ್ ಸೇವೆ, ಕಾನೂನು ಸೇವೆ, ಸಮಾಲೋಚನೆ, & ತಾತ್ಕಾಲಿಕ ವಸತಿ ಒದಗಿಸುವ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಲ್.ನಾಗೇಂದ್ರ ಇಂದು ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಸದಸ್ಯ ಎಂ.ಬಿ.ನಾಗರಾಜ್, ಮಹಿಳಾ & ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕಿ ಪದ್ಮ, ನಿರ್ಮಿತಿ ಕೇಂದ್ರದ ಯೋಜನಾ ಇಂಜಿನಿಯರ್ ಲವ, ಚಾಮರಾಜ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ, ಪ್ರಧಾನ ಕಾರ್ಯದರ್ಶಿ ಪುನೀತ್, ಎಲ್.ಮಂಜುನಾಥ್, ದಿನೇಶ್ ಗೌಡ, ಸುರೇಶ್ ಬಾಬು, ಸ್ವಪ್ನ ಶೇಖರ್ ಹಾಗೂ ಇತರರು ಹಾಜರಿದ್ದರು.