ಬೆಳಗಾವಿ ಲೋಕಸಭಾ ಸ್ಥಾನ ಮಾಜಿ ಸಿಎಂಗೆ ಒಲಿಯುತ್ತಾ ?..

  • 15 Jan 2024 , 3:29 AM
  • Bengaluru
  • 99

ಬೆಳಗಾವಿ: ಸಂಸದ ಹಾಗೂ ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆಗೆ ಬಿಜೆಪಿ ಹೈಕಮಾಂಡ್ ಮಾಸ್ಟರ್ ಪ್ಲಾನ್ ನಡೆಸಿದ್ದಾರಂತೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯ ಪ್ರಬಲ ನಾಯಕನನ್ನು ಆಯ್ಕೆ ಮಾಡಲು ಬಿಜೆಪಿ ಹೈಕಮಾಂಡನ್ ಚಿಂತನೆ ನಡೆಸಿದ್ದು, ಈಗಾಗಲೇ ತೆರೆಮರೆಯಲ್ಲಿ ಅಭ್ಯರ್ಥಿಯನ್ನು ಅಂತಿಮಗೊಳಿಸಿದ್ದಾರೆ ಎನ್ನಲಾಗಿದೆ. ಬಿಜೆಪಿ ಹೈಕಮಾಂಡ್ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಮಾಜಿ ಸಿಎಂ, ಹಾಲಿ ಸಚಿವ ಜಗದೀಶ್ ಶೆಟ್ಟರ್ ಗೆ ಟಿಕೆಟ್ ನೀಡಲು ಬಿಜೆಪಿ ಹೈಕಮಾಂಡ್ ನಾಯಕರು ಚಿಂತನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಜಗದೀಶ್ ಶೆಟ್ಟರ್ ಅವರಿಗೆ ರಾಜ್ಯದ ಮುಖ್ಯಮಂತ್ರಿ ಆಗಿ ಕಾರ್ಯನಿರ್ವಹಿಸಿರುವ ಅನುಭವವಿದೆ. ಹೈಕಮಾಂಡ್ ನಾಯಕರಿಗೂ ಕೇಂದ್ರ ಸಂಪುಟದಲ್ಲಿ ಅನುಭವವಿರುವ ವ್ಯಕ್ತಿಯ ಅವಶ್ಯಕತೆ ಇದೆ. ಹೀಗಾಗಿ, ಜಗದೀಶ್ ಶೆಟ್ಟರ್ ಅವರಿಗೆ ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್ ಕೊಟ್ಟರೆ ಹೈಕಮಾಂಡ್ ನಾಯಕರ ಬೇಡಿಕೆ, ಅಂಗಡಿ ಕುಟುಂಬಸ್ಥರ ಆಶಯ ಎರಡನ್ನೂ ಈಡೇರಿಸಿದಂತೆ ಆಗುತ್ತದೆ ಎನ್ನುವುದು ಹೈಕಮಾಂಡ್ ಲೆಕ್ಕಾಚಾರವಾಗಿದೆ.

Read All News