ಮರಾಠ ಅಭಿವೃದ್ಧಿ ನಿಗಮಕ್ಕೆ ವಿರೋಧ; ಕರವೇ ಪ್ರವೀಣ್ ಶೆಟ್ಟಿ ಬಣದಿಂದ ಪ್ರತಿಭಟನೆ

  • 15 Jan 2024 , 1:36 AM
  • Belagavi
  • 176

ಬೆಳಗಾವಿ: ರಾಜ್ಯ ಸರ್ಕಾರದ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ವಿರೋಧ ವ್ಯಕ್ತಪಡಿಸಿರುವ ಕನ್ನಡಪರ ಸಂಘಟನೆಗಳು ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹಿನ್ನಲೆ ನಗರದಲ್ಲಿಂದು ಚೆನ್ನಮ್ಮ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದಿಂದ ಪ್ರತಿಭಟನೆ ನಡೆಸಿದರು. ಪ್ರತಿವರ್ಷ ನಡೆಯುವ ಕರ್ನಾಟಕ ರಾಜ್ಯೋತ್ಸವದಂದು ಬೆಳಗಾವಿಯಲ್ಲಿ ಇದರ ವಿರುದ್ಧ ಕರಾಳ ದಿನಾಚರಣೆ ಮಾಡುತ್ತಾ ಬಂದಿರುವ ಮರಾಠ ಸಮುದಾಯದವರಿಗೆ ನಮ್ಮ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ಮಾಡುತ್ತಿರುವುದು ಖಂಡನೀಯ.

ಇಂತಹ ಸರ್ಕಾರಕ್ಕೆ ದಿಕ್ಕಾರ ಎಂದು ಘೋಷಣೆ ಕೂಗಿ ಚೆನ್ನಮ್ಮ ವೃತ್ತದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಭಾವಚಿತ್ರ ಸುಡುವ ಮೂಲಕ ಆಕ್ರೋಶ ಹೊರಹಾಕಿದರು.

ಈಗಾಗಲೇ ರೈತಪರ ಸಂಘಟನೆಗಳು, ಕನ್ನಡಪರ ಸಂಘಟನೆಗಳು ಹಾಗೂ ಇನ್ನಿತರರು ಸಹಕಾರ ನೀಡುವುದಾಗಿ ತಿಳಿಸಿದ್ದಾರೆ. ಆದ್ದರಿಂದ ಮುಖ್ಯಮಂತ್ರಿಗಳು ಆದೇಶವನ್ನು ಹಿಂತೆಗೆದುಕೊಳ್ಳಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕರ್ನಾಟಕದಾದ್ಯಂತ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ನಂತರ ಆದೇಶವನ್ನು ಹಿಂಪಡೆಯುವಂತೆ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

Read All News