ಮುಂಬೈ: ಡ್ರಗ್ಸ್ ಪ್ರಕರಣಕ್ಕೆ ಎನ್.ಸಿ.ಬಿ ತನ್ನ ಬೇಟೆಯನ್ನು ಮತ್ತೆ ಮುಂದುವರಿಸಿದ್ದು ಇದಕ್ಕೆ ಸಂಬಂಧಿಸಿದಂತೆ ಹಾಸ್ಯ ಕಲಾವಿದೆ ಭಾರತಿ ಸಿಂಗ್ ಹಾಗೂ ಪತಿ ಹರ್ಷ್ ಲಿಂಬಚಿಯಾ ಅವರನ್ನು ಎನ್. ಸಿ.ಬಿ. ಅಧಿಕಾರಿಗಳು ವಿಚಾರಣೆ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಕಿರುತೆರೆಯಲ್ಲಿ ಖ್ಯಾತ ಹಾಸ್ಯ ನಟಿಯಾಗಿ ಭಾರತಿ ಸಿಂಗ್ ಹೆಸರು ಪಡೆದಿದ್ದಾರೆ. ಅನೇಕ ರಿಯಾಲಿಟಿ ಶೋಗಳ ನಿರೂಪಕಿಯಾಗಿಯೂ ಇವರು ಕಾಣಿಸಿಕೊಂಡಿದ್ದಾರೆ ಭಾರತಿ ಸಿಂಗ್ ಹಾಗೂ ಪತಿ ಹರ್ಷ್ ಈ ಇಬ್ಬರೂ ಕೂಡ ಡ್ರಗ್ಸ್ ಸೇವನೆ ಮಾಡುತ್ತಿದ್ದ ಆರೋಪಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಬೆಳಗ್ಗೆ ಅಂಧೇರಿಯ ಭಾರತಿ ಸಿಂಗ್ ನಿವಾಸದ ಮೇಲೆ ಎನ್‍ಸಿಬಿ ದಾಳಿ ನಡೆಸಿತ್ತು. ಇದೀಗ ಭಾರತಿ ಹಾಗೂ ಹರ್ಷ್ ಅವರನ್ನು ಬಂಧಿಸಲಾಗಿದೆ.