ಶಾಸಕ ಯತ್ನಾಳ ಪ್ರತಿಕೃತಿಗೆ ಸೀರೆ ಉಡಿಸಲು ಯತ್ನ;ಪೊಲೀಸರು ಹಾಗೂ ಕಾರ್ಯಕರ್ತರ ಮಧ್ಯೆ ವಾಗ್ವಾದ

  • 14 Jan 2024 , 11:24 PM
  • Belagavi
  • 196

ಬೆಳಗಾವಿ: ಗಡಿನಾಡು ಬೆಳಗಾವಿ ಜಿಲ್ಲೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರತಿಭಟನೆಗಳು ಮುಂದುವರೆದಿವೆ. ಕನ್ನಡಪರ ಹೋರಾಟಗಾರರಿಗೆ ರೋಲ್‌ಕಾಲ್ ಹೋರಾಟಗಾರರು ಎಂದು ಹೇಳಿಕೆ ಕೊಟ್ಟ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು‌.‌ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ವಿರುದ್ಧ ಘೋಷಣೆ ಕೂಗಿ ಬೊಬ್ಬೆ ಹೊಡೆದು ಪ್ರತಿಭಟನೆ ನಡೆಸಿದರು.

ಇದೇ ವೇಳೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಪ್ರತಿಕೃತಿಗೆ ಸೀರೆ ಉಡಿಸಿ ಬೆಂಕಿ ಹಚ್ಚಲು ಯತ್ನಿಸಿದ ಕಾರ್ಯಕರ್ತರಿಗೆ ಪೊಲೀಸರು ತಡೆಯೊಡ್ಡಿದರು.‌ ಈ ವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ಮಧ್ಯೆ ವಾಗ್ವಾದ ನಡೆಯಿತು.

Read All News