ಬೆಂಗಳೂರು: ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಐಎಂಎ ಸಮೂಹ ಕಂಪನಿಯ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಬಂಧಿಸಿದ್ದಾರೆ. ಐಎಂಎ ಪ್ರಕರಣದಲ್ಲಿ ರೋಷನ್ ಬೇಗ್ ಪಾತ್ರದ ಬಗ್ಗೆ ಪ್ರಬಲ ಸಾಕ್ಷ್ಯಗಳನ್ನು ಸಿಬಿಐ ವಶಪಡಿಸಿಕೊಂಡಿದೆ.