ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ; ಶಾಸಕ ದುರ್ಯೋಧನ ಐಹೊಳೆ

  • 17 Dec 2023 , 11:49 PM
  • Belagavi
  • 98

ಬೆಳಗಾವಿ: ರಾಜ್ಯ ಸರ್ಕಾರದ ಅಧೀನದಲ್ಲಿ ಬರುವ ವಿವಿಧ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕಾತಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜಿಲ್ಲೆಯ ರಾಯಬಾಗ ಮತ ಕ್ಷೇತ್ರದ ಶಾಸಕ ದುರ್ಯೋಧನ ಐಹೊಳೆ ಅವರನ್ನು ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಿ ಸರ್ಕಾರ ಆದೇಶಿಸಿಸಿದ್ದು ಈ ಹಿಂದೆ ಶಾಸಕ ದುರ್ಯೋಧನ ಐಹೊಳೆ ಅವರಿಗೆ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಆದರೆ ಅವರು ಈ ಹುದ್ದೆ ಸ್ವೀಕರಿಸಿರಲಿಲ್ಲ ಈಗ ಮತ್ತೆ ಸರ್ಕಾರ ಅವರನ್ನು ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಿದೆ.

Read All News