ಬೆಂಗಳೂರು: ಕನ್ನಡಿಗರಿಗೆ ಕಂಪನ ಮೂಡಿಸಲು ಮತ್ತೆ ಸಿದ್ಧವಾಗಿದ್ದು, 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ನಿಗದಿಯಾಗಿದೆ. ಈ ಬಾರಿಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಾವೇರಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ. 2021 ರ ಫೆಬ್ರವರಿ 26 , 27 ಮತ್ತು 28 ರಂದು ದಿನಾಂಕ ನಿಗಧಿ ಪಡೆಸಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ . ಮನು ಬಳಗಾರ್ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕೊರೊನಾ ಸೋಂಕು ಇಳಿಮುಖವಾಗುತ್ತಿದ್ದು ಮಾರ್ಗಸೂಚಿಗಳನ್ನ ಸಡಿಲಗೊಳಿಸಿ ಜಾತ್ರೆಗೆ ಅನುವು ಮಾಡಿಕೊಡುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗುತ್ತದೆ ಎಂದರು.