ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳ ಆರೋಪದ ಪ್ರಕರಣ ದಾಖಲಾಗಿದೆ. ಈ ದೂರು ರಾಮನಗರ ಜಿಲ್ಲೆಯ ಕಗ್ಗಳಿಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಪೊಲೀಸರ ಪ್ರಕಾರ, ಈ ಘಟನೆ ಕಗ್ಗಳಿಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಖಾಸಗಿ ರೆಸಾರ್ಟ್‌ನಲ್ಲಿ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಶಾಸಕ ಮುನಿರತ್ನ ಸೇರಿದಂತೆ ಏಳು ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.