ಚಿಕ್ಕೋಡಿ : 17 ತಿಂಗಳ ಮಗನೊಂದಿಗೆ ಬಾವಿಗೆ ಹಾರಿ ಮಹಿಳೆಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಗೂರ ಗ್ರಾಮದಲ್ಲಿ ನಡೆದಿದೆ.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಗನೊಂದಿಗೆ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗುತ್ತಿದ್ದು, ಗಾಯತ್ರಿ ವಾಘ್ಮೋರೆ (26),ಪುತ್ರ ಕುಶಾಲ ವಾಘ್ಮೋರೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಕಾರ್ಯಾಚರಣೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಚಿಕ್ಕೋಡಿ ತಾಲೂಕಾಸ್ಪತ್ರೆಗೆ ಮೃತದೇಹಗಳ ರವಾನಿಸಲಾಗಿದೆ.
ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.