ಎಎಪಿಗೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ ನೀಡಿದ ಚುನಾವಣಾ ಆಯೋಗ

  • Krishna Shinde
  • 15 Jan 2024 , 12:09 AM
  • Delhi
  • 310

ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ ಚುನಾವಣಾ ಆಯೋಗ ಸೋಮವಾರ ರಾಷ್ಟ್ರೀಯ ಪಕ್ಷದ ಸ್ಥಾನಮಾನ ನೀಡಿದೆ. 

ಎನ್‌ಸಿಪಿ, ಸಿಪಿಐ ಮತ್ತು ತೃಣಮೂಲ ಕಾಂಗ್ರೆಸ್‌ಗೆ ರಾಷ್ಟ್ರೀಯ ರಾಜಕೀಯ ಪಕ್ಷಗಳ ಸ್ಥಾನಮಾನವನ್ನು ಹಿಂಪಡೆಯಲಾಗುವುದು ಎಂದು ಚುನಾವಣಾ ಸಮಿತಿ ಹೇಳಿದೆ.

 ಬಿಜೆಪಿ, ಕಾಂಗ್ರೆಸ್, ಸಿಪಿಐ(ಎಂ),ಬಹುಜನ ಸಮಾಜ ಪಕ್ಷ ,ನ್ಯಾಷನಲ್ ಪೀಪಲ್ಸ್ ಪಾರ್ಟಿಗಳ ಜೊತೆ ಈಗ  ಎಎಪಿ ಭಾರತದಲ್ಲಿರುವ ರಾಷ್ಟ್ರೀಯ ಪಕ್ಷವಾಗಿದೆ.

ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಪಕ್ಷದ ಸ್ಥಾನಮಾನಕ್ಕೆ ಸಂಬಂಧಿಸಿದಂತೆ ಏಪ್ರಿಲ್ 13 ರ ಮೊದಲು ಆದೇಶವನ್ನು ಹೊರಡಿಸುವಂತೆ ಕರ್ನಾಟಕ ಹೈಕೋರ್ಟ್ ಕಳೆದ ವಾರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರಿಗೆ ನಿರ್ದೇಶನಗಳನ್ನು ನೀಡಿದ ನಂತರ ಈ ಬೆಳವಣಿಗೆಯಾಗಿದೆ.

Read All News