ಬೆಳಗಾವಿ: ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಅವರಿಗೆ ಭ್ರಷ್ಟಾಚಾರದ ವಿರುದ್ಧ ಮಾತನಾಡುವ ಯಾವುದೇ ನೈತಿಕತೆ ಇಲ್ಲ ಎಂದು ಸಾಮಾಜಿಕ ಕಾರ್ಯಕರ್ತ ಸುಜೀತ ಮುಳಗುಂದ ಹೇಳಿದರು.
ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಅವರು ಭ್ರಷ್ಟಾಚಾರ ಆರೋಪದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದರು.
ಕಳೆದ 2012ರಲ್ಲಿ ಕಾಂಗ್ರೆಸ್ ನ ಶಾಸಕರಾಗಿದ್ದ ಕೃಪಾಕರ ಸಿಂಗ್ ಭ್ರಷ್ಟಾಚಾರ ಮಾಡಿದ ಆರೋಪವನ್ನು ಒಬ್ಬ ಸಾಮಾಜಿಕ ಕಾರ್ಯಕರ್ತ ಸಂಜೀವ ತಿವಾರಿ ಮಾಡಿದ್ದರು.
ಆಗ ಬಿಜೆಪಿಯವರೇ ಹೋಗಿ ಪ್ರತಿಭಟನೆ ಮಾಡಿದ್ದರು. ಆದರೆ ಆಗ ಮಾಡಿದ ಪ್ರತಿಭಟನೆ ಈಗ ತಮ್ಮ ಶಾಸಕರು ಭ್ರಷ್ಟಾಚಾರ ಮಾಡಿದ್ದರೂ ಅವರ ವಿರುದ್ಧ ಪ್ರತಿಭಟನೆ ಮಾಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಶಾಸಕ ಅಭಯ ಪಾಟೀಲ ಮೇಲೆ ಭ್ರಷ್ಟಾಚಾರ ಆರೋಪ ಮಾಡಿರುವ ನನ್ನ ಮೇಲೆ ಒತ್ತಡ ಹಾಕಿ ಹಿಂಪಡೆಯುವಂತೆ ದಬ್ಬಾಳಿಕೆ ಮಾಡುತ್ತಿದ್ದಾರೆ. ನನ್ನ ಕುಟುಂಬಕ್ಕೆ ಜೀವ ಹಾನಿಯಾದರೆ ನೇರವಾಗಿ ಶಾಸಕ ಅಭಯ ಪಾಟೀಲರೇ ಕಾರಣ ಎಂದರು.