ಬೆಳಗಾವಿ : ಶಕ್ತಿ ಯೋಜನೆಯಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸಾಕಷ್ಟು ಸಮಸ್ಯೆ ಆಗುತ್ತಿದ್ದು, ಹೆಚ್ಚಿನ ಬಸ್ ಗಳನ್ನು ಒದಗಿಸುವಂತೆ ಆಗ್ರಹಿಸಿ, ಚೆನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ಹಾಕಿ ವಿದ್ಯಾರ್ಥಿಗಳ ಆಕ್ರೋಶ ಹೊರಹಾಕಿದರು.
ವಿದ್ಯಾರ್ಥಿಗಳ ಶೈಕ್ಷಣಿಕ ವೇಳಾಪಟ್ಟಿ ಅನುಗುಣವಾಗಿ ಬಸ್ ಪಾಸ್ ವಿತರಣೆ ಮಾಡಬೇಕು, ಬಸ್ ಸಂಖ್ಯೆ ಕಡಿಮೆ ಇರುವದರಿಂದ ಸರಿಯಾದ ಸಮಯಕ್ಕೆ ತರಗತಿಗಳಿಗೆ ತೆರಳು ಆಗುತ್ತಿಲ್ಲ, ಶಾಲಾ ತರಗತಿಗಳು ಪ್ರಾರಂಭವಾದರೂ ಸಹ ಬಸ್ ಪಾಸ್ ವಿತರಣೆ ಮಾಡದ ಪರಿಣಾಮ ನೂರಾರು ರೂಪಾಯಿ ಕರ್ಚು ಮಾಡಿ ಶಾಲಾ ಕಾಲೇಜುಗಳಿಗೆ ವಿದ್ಯಾರ್ಥಿಗಳು ಬರುತ್ತಿದ್ದಾರೆ ಎಂದರು.
ಶಕ್ತಿಯೋಜನೆಯಿಂದ ಶಾಲಾ,ಕಾಲೇಜು ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತಿದ್ದು ಅದರ ಅನುಗುಣವಾಗಿ ಬಸಗಳ ಸಂಖ್ಯೆ ಹೆಚ್ಚಳ ಮಾಡಬೇಕೆಂದು ಆಗ್ರಹಿಸಿ, ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.