ಬೆಳಗಾವಿ :
ಸಿಎಂ ಸಿದ್ದರಾಮಯ್ಯ ಬರುವ ಸಾಂಬ್ರಾ ವಿಮಾನ ನಿಲ್ದಾಣದಿಂದ ಬೆಳಗಾವಿ ನಗರ ಸಂಪರ್ಕಿಸುವ ರಸ್ತೆಯಲ್ಲಿ ಬಸ್ ಹಾಗೂ ಬೈಕ್ ನಡುವೆ ಅಪಘಾತದಲ್ಲಿ ವ್ಯಕ್ತಿಯೋರ್ವನಿಗೆ ಗಂಭೀರವಾಗಿ ಗಾಯವಾದ ಘಟನೆ ಬುಧವಾರ ನಡೆದಿದೆ.
ಮಹೇಶ ದುಡಗುಂಡಿ ಎಂಬುವವರಿಗೆ ಗಂಭೀರ ಗಾಯ. ಸೂಕ್ತ ಸಮಯಕ್ಕೆ ಆಂಬ್ಯುಲೆನ್ಸ್ ಬಾರದ ಕಾರಣ. ಪೊಲೀಸರು ಪಿಕ್ ಅಪ್ ವಾಹನದಲ್ಲಿ ಗಾಯಾಳನ್ನು ಆಸ್ಪತ್ರೆಗೆ ರವಾನೆ ಮಾಡಿದರು.
ಇತ್ತ ಅಪಘಾತ ನಡೆಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿ ಬಂದ ಸ್ಥಳೀಯರು. ಆಂಬ್ಯುಲೆನ್ಸ್ ಕರೆ ಮಾಡಿದರು ಆದರೆ ಸರಿಯಾದ ಸಮಯಕ್ಕೆ ಬಾರದ ಆಂಬ್ಯುಲೆನ್ಸ್
ಸರಿಯಾದ ಸಮಯಕ್ಕೆ ಬಾರದ ಆಂಬ್ಯುಲೆನ್ಸ್ ನಿಂದ 15 ನಿಮಿಷಕ್ಕೂ ಹೆಚ್ಚು ಕಾಲ ಮಹೇಶ್ ನರಳಾಡಿದರು. ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಗಾಯಾಳನ್ನು ಚಿಕಿತ್ಸೆಗೆ ರವಾನೆ ಮಾಡಲಾಗಿದೆ.ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ