ಗುಜರಾತ :ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಶುಕ್ರವಾರ ಗುಜರಾತ್ ನ ಅಹ್ಮದಾಬಾದ್ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಈ ಕುರಿತು ಟ್ವಿಟ್ ಮೂಲಕ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾತೃ ವಿಯೋಗವಾಗಿದೆ. ಕಳೆದ ಎರಡ್ಮೂರು ದಿನದಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮೋದಿ ತಾಯಿ ಹೀರಾಬೆನ್ ಅವರಿಗೆ 100 ವರ್ಷ ವಯಸ್ಸಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
शानदार शताब्दी का ईश्वर चरणों में विराम... मां में मैंने हमेशा उस त्रिमूर्ति की अनुभूति की है, जिसमें एक तपस्वी की यात्रा, निष्काम कर्मयोगी का प्रतीक और मूल्यों के प्रति प्रतिबद्ध जीवन समाहित रहा है। pic.twitter.com/yE5xwRogJi
— Narendra Modi (@narendramodi) December 30, 2022
ಈ ದೇಶಕ್ಕೆ ಮಹಾನ್ ನಾಯಕನನ್ನು ನೀಡಿದಂತಹ ಭಾರತೀಯರೆಲ್ಲರಿಗೂ ಮಾತೃ ಸ್ವರೂಪಿಯಾದ ಶ್ರೀಮತಿ ಹೀರಾ ಬೆನ್ ಅವರ ನಿಧನದಿಂದ ಭಾರತ ಹಿರಿಯ ಚೇತನವೊಂದನ್ನು ಕಳೆದುಕೊಂಡಿದೆ. ಭಾರತವನ್ನು ಮುನ್ನಡೆಸುವ ಸಮರ್ಥ ನಾಯಕನನ್ನು ನಮ್ಮೆಲ್ಲರಿಗೂ ಕೊಡುಗೆಯಾಗಿ ನೀಡಿದ ಆ ತಾಯಿಯ ಆತ್ಮಕ್ಕೆ ಭಗವಂತನು ಚಿರಶಾಂತಿಯನ್ನು ನೀಡಲಿ ಹಾಗೂ ಅವರ ನಿಧನದಿಂದ ಅವರ ಕುಟುಂಬಸ್ಥರಿಗೆ ವಿಶೇಷವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಆಗಿರುವ ದುಃಖದಲ್ಲಿ ನಾನು ಭಾಗಿ. ಈ ದುಃಖವನ್ನು ಸೈರಿಸುವ ಶಕ್ತಿಯನ್ನು ದಯಾಘನನಾದ ಭಗವಂತ ದಯಪಾಲಿಸಲಿ ಎಂದು ಪ್ರಾರ್ಥಿಸುವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಸಂತಾಪ ಸೂಚಿಸಿದ್ದಾರೆ.