ಸಚಿವ ಸುಧಾಕರ್ ಮನೆಗೂ ಕಾಲಿಟ್ಟ ಕೊರೋನಾ
- 15 Jan 2024 , 1:46 AM
- Bengaluru
- 120
ಬೆಂಗಳೂರು: ಕೊರೋನಾ ವೈರಸ್ ರಾಜ್ಯದಲ್ಲಿ ದಿನೆದಿನೆ ಹೆಚ್ಚುತ್ತಿದೆ ಅದರ ಬೆನ್ನಲ್ಲೇ ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಕುಟುಂಬವನ್ನು ಸಹಾ ಬಿಟ್ಟಿಲ್ಲ ಕೊರೋನಾ ಇಗ ಅವರ ತಂದೆಯ ನಂತರ ಪತ್ನಿ ಹಾಗೂ ಮಗಳಿಗು ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಬೆಂಗಳೂರಿನ ಸದಾಶಿವ ನಗರದಲ್ಲಿರೋ ನಿವಾಸದಲ್ಲಿ ಸುದಾಕಾರ್ ಕುಟುಂಬಕ್ಕೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿತ್ತು.
ಈ ಕುರಿತು ಟ್ವೀಟರ್ ನಲ್ಲಿ ಮಾಹತಿ ನೀಡಿರುವ ಸುಧಾಕರ್, ನಮ್ಮ ಕುಟುಂಬದ ಕೋವಿಡ್ ಪರೀಕ್ಷಾ ವರದಿ ಬಂದಿದ್ದು ನನ್ನ ತಂದೆ, ಪತ್ನಿ ಹಾಗೂ ಮಗಳಿಗೆ ಕೊರೋನಾ ಪಾಸಿಟಿವ್ .ಅವರಿಬ್ಬರು ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನನ್ನ ಇಬ್ಬರು ಗಂಡುಮಕ್ಕಳು ಮತ್ತು ನನಗೆ ಕೊರೋನಾ ನೆಗೆಟಿವ್ ಬಂದಿದೆ ಎಂದು ಟ್ವಿಟ್ ಮೂಲಕ ತಿಳಿಸಿದ್ದಾರೆ