ಗುಜರಾತ್‌ನ ಗಾಂಧಿನಗರದ ನ್ಯಾಯಾಲಯವು 2013 ರ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ ವಿಧಿಸಿದೆ. 2013ರಲ್ಲಿ ಮಾಜಿ ಮಹಿಳಾ ಶಿಷ್ಯೆಯೊಬ್ಬರು ಸಲ್ಲಿಸಿದ್ದ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆ ವಿಧಿಸಲಾಗಿತ್ತು.
ವಾದ-ಪ್ರತಿವಾದ ಆಲಿಸಿದ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಡಿ.ಕೆ.ಸೋನಿ ಜೀವಾವಧಿ ಶಿಕ್ಷೆ ಹಾಗೂ ₹50 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.