ಬೆಳಗಾವಿಯಲ್ಲಿ 7 ಪಿ ಎಫ ಐ ಮುಖಂಡರ ಬಂದನ

  • 15 Jan 2024 , 12:39 AM
  • Belagavi
  • 210

ಬೆಳಗಾವಿ: ಬೆಳ್ಳಂಬೆಳಿಗ್ಗೆ ಫೀಲ್ಡಗೆ ಇಳಿದ ಬೆಳಗಾವಿ ಪೊಲೀಸರು ಏಳು ಜನ ಪಿ ಎಫ್ ಐ ಮುಖಂಡರನ್ನು ಬಂಧಿಸಿ ವಿಚಾರಣೆ ನಡುಸುತ್ತಿದ್ದಾರೆ.

ಏಳು ಜನ ಪಿಎಫ್ಐ ಕಾರ್ಯಕರ್ತರ ವೈದ್ಯಕೀಯ ತಪಾಸಣೆಗೆ ಕರೆದೊಯ್ಯಲು ಪೊಲೀಸರು ಸಿದ್ಧತೆ ನಡೆಸಿದ್ದು ಬಿಗಿ ‌ಪೊಲೀಸ್ ಭದ್ರತೆಯಲ್ಲಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಿದ್ದಾರೆ .

ವೈದ್ಯಕೀಯ ಪರೀಕ್ಷೆ ಬಳಿಕ ನ್ಯಾಯಾಲಯಕ್ಕೆ ಹಾಜರು ಪಡಿಸಲಿರುವ ಪೊಲೀಸರು ಕೆಲವು ದಿನಗಳ ಕಾಲ ಪೊಲೀಸ್ ಕಸ್ಟಡಿ ನೀಡುವಂತೆ ನ್ಯಾಯಾಲಯಕ್ಕೆ ಕೋರಲಿದ್ದಾರೆ ಎಂದು ತಿಳಿದು ಬಂದಿದೆ ಮತ್ತು ಸಿಆರ್‌ಪಿಸಿ 110 ಸೆಕ್ಷನ್ ಅಡಿ ಪಿಎಫ್ಐ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ .

ಆಜಂ ನಗರ ನಿವಾಸಿ PFI ಮಾಜಿ ಜಿಲ್ಲಾಧ್ಯಕ್ಷ ಝಕೀವುಲ್ಲಾ ಫೈಜಿ ,ಅಸಾದ್‌ಖಾನ್ ಸೊಸೈಟಿ ನಿವಾಸಿ SDPI ಜಿಲ್ಲಾಧ್ಯಕ್ಷ ಅಬೀದ್ ಖಾನ್ ಕಡೋಲಿ, ಶಿವಾಜಿ ನಗರ ನಿವಾಸಿ ಸಲಾವುದ್ದೀನ್ ಖಿಲೆವಾಲೆ, ಅಸಾದ್‌ಖಾನ್ ನಿವಾಸಿ ಬದ್ರುದ್ದೀನ್ ಪಟೇಲ್, ಅಮನ್ ನಗರ ನಿವಾಸಿ ಸಮೀವುಲ್ಲಾ ಪೀರ್ಜಾದೆ, ಬಾಕ್ಸೈಟ್ ರೋಡ್ ನಿವಾಸಿ ಜಹೀರ್ ಘೀವಾಲೆ, ವಿದ್ಯಾಗಿರಿ ನಿವಾಸಿ ರೆಹಾನ್ ಅಜೀಜ್(25) ಬಂಧನ.

Read All News