ಫೇಕ್ ನ್ಯೂಸ್ ಹರಡುವವರಿಗೆ ಎಚ್ಚರ : ಸ್ಟ್ರಿಕ್ಟ್ ವಾರ್ನ್ ಮಾಡಿದ ಸಿಎಂ

  • Krishna Shinde
  • 14 Jan 2024 , 9:41 PM
  • Bengaluru
  • 138

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ನ್ಯೂಸ್ ಹಾವಳಿ ಮಿತಿ ಮೀರಿದೆ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ ಸಂಬಂಧಪಟ್ಟ ಅಧಿಕಾರಿಗಳು ಈ ಫೇಕ್‌ನ್ಯೂಸ್‌ಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುತ್ತಿರುವವರನ್ನು ಗುರುತಿಸಿ, ಕಾನೂನು ಕ್ರಮಕ್ಕೆ ಒಳಪಡಿಸಬೇಕು ಎಂದು ಹೇಳಿದ್ದಾರೆ.

ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಫೇಕ್ ನ್ಯೂಸ್‌ಗಳನ್ನು ಹರಡುವ ಮೂಲಕ ಸಮಾಜದ ಸ್ವಾಸ್ಥ್ಯ ಕೆಡಿಸುವ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ, ಕಾನೂನು ರೀತ್ಯ ಕಠಿಣ ಶಿಕ್ಷೆಗೆ ಒಳಪಡಿಸುತ್ತೇವೆ ಎಚ್ಚರಿಕೆ ಎಂದು ಸಿಎಂ ಹೇಳಿದ್ದಾರೆ.

ರಚನಾತ್ಮಕ ಟೀಕೆಗಳಿಗೆ ನಾವು ಮುಕ್ತರಿದ್ದೇವೆ, ಆದರೆ ಸುಳ್ಳು ಸುದ್ದಿಗಳ ಸೃಷ್ಟಿ ಮತ್ತು ಹರಡುವಿಕೆಯನ್ನು ನಾವು ಖಂಡಿತಾ ಸಹಿಸುವುದಿಲ್ಲ ಎಂದು ಹೇಳಿದ್ದಾರೆ.

ಸೈಬರ್ ಪೊಲೀಸರು ಫೇಕ್ ನ್ಯೂಸ್‌ಗಳ ಮೂಲಗಳನ್ನು ಪತ್ತೆಹಚ್ಚಲು ಸರ್ವಸನ್ನದ್ದವಾಗಿ ಕೆಲಸ ಮಾಡಬೇಕು. ಪ್ರತೀ ತಿಂಗಳು ಈ ಬಗ್ಗೆ ವರದಿಯನ್ನು ನೀಡಬೇಕು.

ಸುಳ್ಳು ಸುದ್ದಿಗಳ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನವನ್ನು ಯಾರೇ ಮಾಡಿದರೂ ಅದನ್ನು ಸರ್ಕಾರ ಸಹಿಸುವುದಿಲ್ಲ.

ಸಾಮರಸ್ಯ ಕಾಪಾಡುವ ಜೊತೆಗೆ ಪ್ರತಿಯೊಬ್ಬರಿಗೂ ಶಾಂತಿ, ನೆಮ್ಮದಿಯ ವಾತಾವರಣವನ್ನು ನೀಡಲು ನಾವು ಬದ್ಧರಿದ್ದೇವೆ ಎಂದು ಹೇಳಿದ್ದಾರೆ.

Read All News