ಭಾಗ್ಯಲಕ್ಷ್ಮೀ ಸಕ್ಕರೆ ಕಾರ್ಖಾನೆ ಭ್ರಷ್ಟಾಚಾರ ಪ್ರಕರಣ : ಷೇರುದಾರರು ಕಂಗಾಲು

  • shivaraj bandigi
  • 15 Jan 2024 , 12:12 AM
  • Belagavi
  • 524

ಬೆಳಗಾವಿ :

ಖಾನಾಪುರದ ಬಿಜೆಪಿ ಶಾಸಕ ವಿಠ್ಠಲ ಹಲಗೇಕರ್ ಕಂಪನಿಯಿಂದ ಭಾಗ್ಯಲಕ್ಷ್ಮೀ ( ಲೈಲಾ) ಸಕ್ಕರೆ ಕಾರ್ಖಾನೆಯಲ್ಲಿ 600 ಕೋಟಿ ರೂ. ಭ್ರಷ್ಟಾಚಾರ ಆರೋಪ ಹಿನ್ನೆಲೆ ಸರಕಾರ ನಿವೃತ್ತ ನ್ಯಾಯಾಧೀಶ ಎಸ್.ಬಿ.ವಸ್ತ್ರಮಠ ನೇತೃತ್ವದಲ್ಲಿ ಮಂಗಳವಾರ ಬೆಳಗ್ಗೆ 11 ರಿಂದ 2 ಗಂಟೆಯವರೆಗೂ ಆಡಳಿತ ಮಂಡಳಿಯನ್ನು ತೀವ್ರ ವಿಚಾರಣೆ ನಡೆಸಿದರು.

ಆಡಳಿತ ಮಂಡಳಿ ವಿಚಾರಣೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಿವೃತ್ತ ನ್ಯಾಯಾಧೀಶ ಎಸ್.ಬಿ.ವಸ್ತ್ರಮಠ, ಕರ್ನಾಟಕ ಸರ್ಕಾರದ ಆದೇಶದಂತೆ ಭಾಗ್ಯಲಕ್ಷ್ಮೀ ಸಕ್ಕರೆ ಕಾರ್ಖಾನೆಗೆ ವಿಚಾರಣೆಗಾಗಿ ಆಗಮಿಸಿದ್ದೇನೆ. ಮಾಜಿ ಶಾಸಕಿ ನಿಂಬಾಳ್ಕರ್ ಅವರ ದೂರಿನ ಮೇರೆಗೆ ತನಿಖೆ ಆರಂಭವಾಗಿದೆ. ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿ ತನಿಖೆಗೆ ಸಹಕರಿಸುತ್ತಿದೆ. ಈಗಾಗಲೇ ತನಿಖೆಗೆ ಬೇಕಾದ ದಾಖಲಾತಿಗಳನ್ನು ಒದಗಿಸಿದ್ದಾರೆ ಎಂದರು.

ತನಿಖೆ ಮಾಡಿ ಮೂವತ್ತು ದಿನಗಳ ಒಳಗಾಗಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು. ಡಿ.19 ರಂದು ಮತ್ತೇ ಸಕ್ಕರೆ ಕಾರ್ಖಾನೆಗೆ ಆಗಮಿಸಿ ತನಿಖೆ ನಡೆಸಿ ಸರಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದರು.

ಘಟನೆ ವಿವರ:ಬಿಜೆಪಿ ಶಾಸಕನಿಗೆ ಶಾಕ್ ಕೊಟ್ಟ ಸರಕಾರ ಖಾನಾಪುರದ ಬಿಜೆಪಿ ಶಾಸಕ ವಿಠ್ಠಲ್ ಹಲಗೇಕರ ಮತ್ತು ಅವರ ಕಂಪನಿಯಿಂದ ಭಾಗ್ಯಲಕ್ಷ್ಮಿ ಸಕ್ಕರೆ ಕಾರ್ಖಾನೆಯಲ್ಲಿ 600 ಕೋಟಿಗೂ ಹೆಚ್ಚು ಭ್ರಷ್ಟಾಚಾರದ ಆರೋಪದ ಕುರಿತು ತನಿಖೆಗೆ ಸರ್ಕಾರ ಆದೇಶ ಮಾಡಿದ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ 11ಕ್ಕೆ ಬೆಳಗಾವಿ ನಿವೃತ್ತ ಬೆಳಗಾವಿ ಜಿಲ್ಲಾ ಸತ್ರ ನ್ಯಾಯಾಧೀಶರಾದ ಎಸ್.ಬಿ.ವಸ್ತ್ರಮಠ ಅವರ ನೇತೃತ್ವದಲ್ಲಿ ತನಿಖೆ ನಡೆಸಿದರು.

ಖಾನಾಪುರ ಬಿಜೆಪಿ ಶಾಸಕ ವಿಠ್ಠಲ್ ಹಲಗೇಕರ ಕಾರ್ಖಾನೆಯನ್ನು ನಡೆಸುತ್ತಿರುವ ಹಾಗೂ ಅವರ ಕಂಪನಿಯ ವಿರುದ್ಧದ ಬೃಹತ್ ಭ್ರಷ್ಟಾಚಾರ ಆರೋಪಗಳ ತನಿಖೆಗಾಗಿ, ಕರ್ನಾಟಕ ಸರ್ಕಾರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಎಸ್.ಬಿ.ವಸ್ತ್ರಮಠ ಅವರನ್ನು ವಿಶೇಷ ತನಿಖಾ ಅಧಿಕಾರಿಯನ್ನಾಗಿ ನೇಮಿಸಿತ್ತು.

ಖಾನಾಪುರ ಮಾಜಿ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ನೀಡಿದ ದೂರಿನ ಮೇರೆಗೆ ತನಿಖೆಗೆ ಆದೇಶಿಸಲಾಗಿದೆ. ಬಿಜೆಪಿ ಶಾಸಕ ವಿಠ್ಠಲ್ ಹಲಗೇಕರ ಅವರ ಒಡೆತನದಲ್ಲಿರುವ ತೋಪಿನಕಟ್ಟಿ ಶ್ರೀ ಮಹಾಲಕ್ಷ್ಮಿ ಶುಗರ್ಸ್ ಪ್ರೈವೇಟ್ ಲಿಮಿಟೆಡ್ ನಿರಂತರವಾಗಿ ರೈತರ ಹಣ ಮತ್ತು ನಂಬಿಕೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಮಾಜಿ ಶಾಸಕಿ ಡಾ ಅಂಜಲಿ ನಿಂಬಾಳ್ಕರ್ ತಮ್ಮ ದೂರಿನಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ.

Read All News