ಮತದಾರರನ್ನು ಸೆಳೆಯಲು ಬಿಜೆಪಿಯಿಂದ ಬ್ರಹತ್ ಬೂತ ವಿಜಯ್ ಸಂಕಲ್ಪ
ಕೇಂದ್ರ ಮತ್ತು ರಾಜ್ಯ ಸರಕಾರದ ಕಾರ್ಯಗಳನ್ನು ಜನರಿಗೆ ತಲುಪಿಸಲಾಗುವುದು.
ಜನವರಿ 21 ರಿಂದ 29 ವರೆಗೆ ಬೂತ ವಿಜಯ್ ಸಂಕಲ್ಪ ನಡೆಯಲಿದೆ.
ಮನೆ ಮನೆಗೆ ಹೋಗಿ ಬಿಜೆಪಿ ಕೆಲಸಗಳ ಬಗ್ಗೆ ಹೇಳಲಾಗುವುದು.
ಪ್ರತಿ ಬಿಜೆಪಿ ನಾಯಕರು ಮಾಡಿದ್ ಕೆಲಸಗಳನ್ನು ಜನರಿಗೆ ತಿಳಿಸಲಾಗುವುದು.
ಯೋಜನೆಗಳ ಒಟ್ಟು ಅನುಭವ ತಿಳಿಸಲಾಗುವುದು.
ರಾಜ್ಯ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲಾಗುವುದು.
ನಡ್ಡಾ ಮತ್ತು ಕಟೀಲ್ ಅವರ ನೇತೃತ್ವದಲ್ಲಿ ನಡೆಯಲಿದೆ ಕಾರ್ಯಕ್ರಮ.
ಜಿಲ್ಲಾ ಪಂಚಾಯತಿಯಲ್ಲಿ ಕಾರ್ಯಕ್ರಮ ನಡೆಯುವುದು.
ರಅಶ್ವಥ ನಾರಾಯಣವರ ನೇತೃತ್ವದಲ್ಲಿ ನಡೆಯುಡುವುದು.
ಭಾರತೀಯ ಜನತಾ ಪಾರ್ಟಿ ಇದೇ ಜನವರಿ 21ರಿಂದ ಜನವರಿ 29ರ ವರೆಗೆ ವಿಜಯ ಸಂಕಲ್ಪ ಅಭಿಯಾನವನ್ನು ಆಯೋಜಿಸಿದ್ದು, ಸರಣಿ ಕಾರ್ಯಕ್ರಮಗಳ ಮೂಲಕ ಜನಸಾಮಾನ್ಯರನ್ನು ತಲುಪಲಿದ್ದೇವೆ. ಈ ಕಾರ್ಯಕ್ರಮಕ್ಕೆ ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ. ಪಿ. ನಡ್ಯಾಜಿ ವಿಜಯಪುರದ ಸಿಂಧಗಿಯಲ್ಲಿ ಅಭಿಯಾನಕ್ಕೆ ಚಾಲನೆ ಕೊಡಲಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಿಕಟಪೂರ್ವ ಸಿಎಂ ಮತ್ತು ಮಾರ್ಗದರ್ಶಕರಾದ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಅವರು 21ರಂದು ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವರು.
10 ವಿಭಾಗಗಳಲ್ಲಿ, 39 ಸಂಘಟನಾತ್ಮಕ ಜಿಲ್ಲೆಗಳಲ್ಲಿ, 312
ಮಂಡಲಗಳಲ್ಲಿ ನಮ್ಮ ಕಾರ್ಯಕರ್ತರು ಬಿಜೆಪಿಯ ಸಾಧನೆಯನ್ನು ಮನ ಮನೆಗೆ ತಲುಪಿಸಲಿದ್ದಾರೆ.
ಕೇಂದ್ರ- ರಾಜ್ಯ ಸರಕಾರಗಳ ಸಾಧನೆಗಳ ಕುರಿತು ಕರಪತ್ರಗಳನ್ನು ಹಂಚಿಕೆ ಮಾಡಲಾಗುವುದು. 2 ಕೋಟಿಗಿಂತ ಹೆಚ್ಚು ಮತದಾರರ ಸಂಪರ್ಕ ಮಾಡಿ, ಅವರ ಮನೆಮನೆಗೆ ತೆರಳಿ ಕರಪತ್ರ ಹಂಚಲಿದ್ದೇವೆ. ಫಲಾನುಭವಿಗಳನ್ನು ಮಾತನಾಡಿಸಿ ಒಂದು ಕೋಟಿಗಿಂತ ಹೆಚ್ಚು ಕುಟುಂಬಗಳನ್ನು ಸಂಪರ್ಕಿಸಲಿದ್ದೇವೆ. ಬಿಜೆಪಿ ಸರಕಾರಗಳ ಯೋಜನೆಗಳಿಂದ ಈ ಕುಟುಂಬಗಳ ಸಬಲೀಕರ ಆದುದನ್ನು ತಿಳಿಸಲಿದ್ದೇವೆ. ವಾಹನಗಳ ಮೇಲೆ ಸ್ಟಿಕರ್ ಹಾಕಿಸುವ ಕೆಲಸವೂ ನಡೆಯಲಿದೆ.
ಜನವರಿ 21ರಿಂದ ಅಭಿಯಾನದ ಆರಂಭ ಆಗಲಿದ್ದು, ಅದಕ್ಕಾಗಿ ಈಗಾಗಲೇ ವ್ಯವಸ್ಥಿತವಾಗಿ ಪೂರ್ವಭಾವಿ ಸಿದ್ಧತೆ ನಡೆದಿತ ಜಿಲ್ಲಾ ಮತ್ತು ಮಂಡಲಗಳಲ್ಲಿ ಸಭೆಗಳು ನಡೆಸಿ ಭಾರತೀಯ ಜನತಾ ಪಕ್ಷ ಮುಂಬರುವ ಚುನಾವಣೆಯಲ್ಲಿ 150 ಸ್ಥಾನಗಳನ್ನು ಪಡೆಯುವ ಗುರಿ ಹಾಕಿಕೊಂಡಿದೆ. ಅದಕ್ಕಾಗಿ ಪಕ್ಷವು ತಳಹಂತದಿಂದ ಪಕ್ಷದ ಸದೃಢೀಕರಣ ಸೇರಿ ವಿವಿಧ ಕಾರ್ಯತಂತ್ರಗಳನ್ನು ಮಾಡುತ್ತಿದೆ.
'ಡಬಲ್ ಎಂಜಿನ್' ಸರ್ಕಾರಗಳ ಯೋಜನೆಗಳ ಫಲಾನುಭವಿಗಳ ಸಂಖ್ಯೆ ರಾಜ್ಯದಲ್ಲಿ ಒಂದು ಕೋಟಿಗೂ ಅಧಿಕ ಇದ್ದು, ಆ ಪಟ್ಟಿ, ತಯಾರಿಸಲಾಗಿದೆ. ಫಲಾನುಭವಿಗಳನ್ನು ಸಂಪರ್ಕಿಸುವ ಕಾರ್ಯವನ್ನು ಪಕ್ಷದ ಕಾರ್ಯಕರ್ತರು ತಳಮಟ್ಟದಿಂ ಮಾಡಲಿದ್ದಾರೆ.
ಇದಲ್ಲದೆ ಮನೆಮನೆಗೆ ಕರಪತ್ರ ಹಂಚುವುದು, ಬಿಜೆಪಿ ಪಕ್ಷದ ಸ್ಟಿಕರ್ ಹಚ್ಚಲು ಪ್ರೇರೇಪಿಸುವುದು, ಗೋಡೆಗಳ ಮೇಲೆ ಬಿಜೆಪಿ ಸಾಧನೆ ಬಿಂಬಿಸುವ ಪೇಂಟಿಂಗ್ ಹಾಗೂ ಸದಸ್ಯತ್ವ ಅಭಿಯಾನ ಈ ಅಭಿಯಾನದ ಭಾಗವಾಗಿದೆ. ಕ್ಷೇತ್ರ ಕಾರ್ಯಾಚರಣೆಗೆ ಇಳಿಯಲಿರುವ ರಾಜ್ಯ, ಜಿಲ್ಲಾ ಹಾಗೂ ಮಂಡಲಗಳಲ್ಲಿ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಎಲ್ಲಾ ಚುನಾಯಿತ ಪ್ರತಿನಿಧಿಗಳು ಸರ್ಕಾರದ ಸಾಧನೆಗಳನ್ನು ಒಳಗೊಂಡ ಕರಪತ್ರಗಳನ್ನು ಸುಮಾರು ಒಂದು ಕೋಟಿ ಮನೆಗಳಿಗೆ ಹಂಚುವ ಗುರಿ ಹಾಕಿಕೊಂಡಿದ್ದಾರೆ.
ಫಲಾನುಭವಿಗಳನ್ನು ಗುರುತಿಸುವುದರ ಜತೆಗೆ ಅವರಿಗೆ ಫಲಾನುಭವಿ ಪತ್ರವನ್ನೂ ವಿತರಿಸಲಾಗುತ್ತದೆ. ಸಾಮಾಜಿಕ ಜಾಲತಾಣಗಳ ಮೂಲಕವೂ ನಮ್ಮ ಯೋಜನೆಗಳ ಯಶಸ್ಸನ್ನು ಸಾರಲಾಗುವುದು. ಈ ಅಭಿಯಾನದ ಅವಧಿಯಲ್ಲಿ ಒಂದು ಹೊಸ ಸದಸ್ಯರು ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ.
ಸದಸ್ಯತ್ವ ಅಭಿಯಾನ ಸಂಪೂರ್ಣ ಆನ್‌ಲೈನ್ ಇರಲಿದ್ದು (ಮಿಸ್ ಕಾಲ್),ನೋಂದಣಿಯಾದ ಸದಸ್ಯರ ಸಂಖ್ಯೆಯನ್ನು ವೆಬ್‌ಸೈಟಿನಲ್ಲಿ ನೇರವಾಗಿ ನೋಡಬಹುದು. ನೋಂದಣಿ ಪ್ರಕ್ರಿಯೆ ಬಗೆಗೂ ಕಾರ್ಯಕರ್ತರಿಗೆ ಕಾರ್ಯಾಗಾರಗಳನ್ನು ನಡೆಸಲಾಗುತ್ತದೆ.
ಈ ಕಾರ್ಯಕ್ರಮದಲ್ಲಿ MB ಜಿರಲಿ , ಮಹಾಂತೇಶ್ ಕವಟಗಿ ಮಠ್ ,ಸಂಜಯ್ ಪಾಟೀಲ್ ,ಸಂದೀಪ್ ದೇಶಪಾಂಡೆ ,ಮಲ್ಲಿಕಾರ್ಜುನ್ ಮಡಂಣ್ಣವರ್ ,ಸಂಜಯ್ ಕಂಚಿ ,ಬಡ್ಕರ್ ಮುಂತಾದವರು ಪಾಲ್ಗೊಂಡಿದ್ದರು.