ಬೆಳಗಾವಿ :
ಬೆಳಗಾವಿಯಲ್ಲಿ ರಾಜ್ಯ ಸರಕಾರದ ವಿರುದ್ದ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತಿದ್ದು ಬೆಳಗಾವಿಯಲ್ಲಿನ ಚೆನ್ನಮ್ಮ ವೃತ್ತದಲ್ಲಿ ಇಂದು ಸೋಮವಾರ 12 ಗಂಟೆಗೆ ರಾಜ್ಯದಲ್ಲಿ ಭಗವಾ ಧ್ವಜ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ನಡೆಯುತ್ತಿವೆ ಮತ್ತು ರಾಮ ಧ್ವಜವನ್ನ ಕಿತ್ತುಹಾಕಿದ್ದಾರೆ ಎಂದು ರಾಜ್ಯಸಭಾ ಸದಸ್ಯ ಈರಣ್ಣಾ ಕಾಡಾಡಿ ನೇತೃತ್ವದಲ್ಲಿ ನಡೆದ ಪ್ರತಿಭಟನೆ ನಡೆಸಿದರು.
ಇದೇ ಸಂದರ್ಭದಲ್ಲಿ ಸಂಸದೆ ಮಂಗಳಾ ಅಂಗಡಿ,ರಾಜ್ಯ ಬಿಜೆಪಿ ಉಪಾಧ್ಯಕ್ಷ ಅನಿಲ್ ಬೆನಕೆ,ಸಂಜಯ ಪಾಟೀಲ ಸೇರಿದಂತೆ ಹಲವು ಬಿಜೆಪಿಗರು ಭಾಗಿಯಾಗಿದ್ದರು.