ಬೆಳಗಾವಿ :
ರಾಜ್ಯ ಕಾಂಗ್ರೆಸ್ ಸರಕಾರ ದಲಿತರಿಗೆ ಮೀಸಲಿಟ್ಟ ಸಾವಿರಾರು ಕೋಟಿ ರೂ. ಅನುದಾನವನ್ನು ದುರುಪಯೋಗ ಪಡಿಸಿಕೊಂಡಿದೆ ಎಂದು ಆರೋಪಿಸಿ ಬೆಳಗಾವಿ ಬಿಜೆಪಿ ಕಾರ್ಯಕರ್ತರು ಶನಿವಾರ ಇಲ್ಲಿನ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರಕಾರ ತನ್ನ ಗ್ಯಾರಂಟಿ ಯೋಜನೆಯನ್ನು ಭದ್ರಪಡಿಸಿಕೊಳ್ಳಲು ದಲಿತರಿಗೆ ಮೀಸಲಿಟ್ಟ ಅನುದಾನವನ್ನು ದುರುಪಯೋಗ ಮಾಡಿದೆ. ಸರಕಾರಕ್ಕೆ ದಲಿತರ ಏಳಿಗೆ ಬೇಕಿಲ್ಲ ಎಂದು ದೂರಿದರು.