ಸಂಗೊಳ್ಳಿ ರಾಯಣ್ಣ ಪುತ್ಥಳಿ ಸ್ಥಾಪನೆಗೆ ಚಾಲನೆ ನೀಡಿದ ಚನ್ನರಾಜ ಹಟ್ಟಿಹೊಳಿ

  • 15 Jan 2024 , 2:51 AM
  • Belagavi
  • 157

ಬೆಳಗಾವಿ:ಸಾಂಬ್ರಾ ಗ್ರಾಮದ ಮಾರುತಿ ಗಲ್ಲಿಯಲ್ಲಿ ನೂತನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಟಾಪನೆಯ ಕಾಂಕ್ರೀಟ್ (ಸ್ಲ್ಯಾಬ್ ಭರಣಿ) ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾನುವಾರ ಪೂಜೆ ನೆರವೇರಿಸಿದರು.

ಲಕ್ಷ್ಮೀ ತಾಯಿ ಫೌಂಡೇಷನ್‌ ವತಿಯಿಂದ ಈ ಕೆಲಸವನ್ನು ಕೈಗೆತ್ತಿಕೊಳ್ಳಲಾಗಿದ್ದು, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಎಲ್ಲ ಮಹನೀಯರ ತ್ಯಾಗ, ಬಲಿದಾನಗಳನ್ನು ಗೌರವಿಸುವ ದೃಷ್ಟಿಯಿಂದ ಈ ಕಾರ್ಯವನ್ನು ಕೈಗೊಳ್ಳಲಾಗಿದೆ ಎಂದು ಚನ್ನರಾಜ ಹಟ್ಟಿಹೊಳಿ ತಿಳಿಸಿದರು. ಲಕ್ಷ್ಮೀ ತಾಯಿ ಫೌಂಡೇಶನ್ ವತಿಯಿಂದ ಹಲವಾರು ವಿದಾಯಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಜನರ ಸಹಕಾರ ಇದೇ ರೀತಿ ಇರಲಿ ಎಂದು ಅವರು ಕೋರಿದರು.

ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ನಾಗೇಶ ದೇಸಾಯಿ, ಈರಪ್ಪ ಸುಳೇಭಾವಿ, ಸದು ಪಾಟೀಲ, ಲಕ್ಷ್ಮಣ ಕೊಳ್ಳಪ್ಪಗೋಳ, ಮಹೇಶ ಕುಲಕರ್ಣಿ, ರಂಜನಾ ಅಪ್ಪಯಾಚೆ, ಸಂತೋಷ ದೇಸಾಯಿ, ಗ್ರಾಮ ಪಂಚಾಯತಿಯ ಎಲ್ಲ ಪದಾಧಿಕಾರಿಗಳು ಉಪಸ್ಥಿತರಿದ್ದರು.

Read All News