ಬೆಳಗಾವಿ ನಗರದ ಕುಮಾರ ಗಂಧರ್ವ ರಂಗ ಮಂದಿರದಲ್ಲಿ ನಡೆದ ಬೆಳಗಾವಿ ಜಿಲ್ಲೆಯ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇಮಕವಾದ ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರ ವಿತರಣಾ ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾಗವಹಿಸಿದ್ದರು.
ಈ ಸಮಯದಲ್ಲಿ ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್, ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಶಾಸಕ ಆಸೀಫ್ (ರಾಜು) ಸೇಠ್, ಕರ್ನಾಟಕ ಸರ್ಕಾರದ ನವದೆಹಲಿಯ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಮೊದಲಾದವರು ಉಪಸ್ಥಿತರಿದ್ದರು.