ಕಿತ್ತೂರು ಉತ್ಸವಕ್ಕೆ ಸಿಎಂ ಬರಲ್ಲ : ಬಾಬಾಸಾಹೇಬ ಪಾಟೀಲ

  • Shivaraj Bandigi
  • 15 Jan 2024 , 2:45 AM
  • Belagavi
  • 294

ಬೆಳಗಾವಿ : ಕಿತ್ತೂರು ಉತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಲಾಗಿತ್ತು. ಮೈಸೂರು ದಸರಾ ಇರುವುದರಿಂದ ಅವರು ಆಗಮಿಸುತ್ತಿಲ್ಲ ಎಂದು ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.

ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಿತ್ತೂರು ಉತ್ಸವ ಅದ್ದೂರಿಯಾಗಿ ಆಚರಣೆ ಮಾಡಲು ಸ್ವತಃ ಸಿದ್ದರಾಮಯ್ಯ ಅವರೇ ಎರಡೂ ಕೋಟಿ ರೂ. ಅನುದಾನ ನೀಡಿದ್ದಾರೆ ಎಂದರು.

ಬೆಳಗಾವಿ ಜಿಲ್ಲಾ ಕಾಂಗ್ರೆಸ್ ನಲ್ಲಿ ಯಾವುದೇ ಬಣಗಳು ಇಲ್ಲ. ಎಲ್ಲವೂ ಕಾಂಗ್ರೆಸ್ ಬಣ. ನಮಗೆ ಆ ರೀತಿ ಅನ್ನಿಸಿಲ್ಲ ಎಂದರು.

ಶಾಸಕ ಆಸೀಫ್ ಸೇಠ್ ಮಾತನಾಡಿ, ಬೆಳಗಾವಿ ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿ ಇದೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಸಮರ್ಥವಾಗಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತಿದ್ದಾರೆ ಎಂದರು.
ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲು ಸರಕಾರಕ್ಕೆ ಪತ್ರ ಬರೆದಿರುವ ವಿಷಯ ನನ್ನ ಗಮನಕ್ಕೆ ಇಲ್ಲ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು‌.

Read All News