ಕಾಂಗ್ರೆಸ್ ರೈತರ ಜೊತೆ ಹಿಟ್ ಅಂಡ್ ರನ್ ಆಟವಾಡುತ್ತಿದೆ: ಬೆಳಗಾವಿಯಲ್ಲಿ ಬಿಜೆಪಿ ಗರ್ಜನೆ

  • krishna s
  • 4 Nov 2024 , 7:47 AM
  • Belagavi
  • 385

ಬೆಳಗಾವಿ: ಕರ್ನಾಟಕ ರಾಜ್ಯ ಸರ್ಕಾರವು ರೈತರ ಜಮೀನುಗಳನ್ನು ವಕ್ಫ್ ಆಸ್ತಿ ಎಂದು ಪಹಣಿ ಪತ್ರದಲ್ಲಿ ದಾಖಲು ಮಾಡುವ ಮೂಲಕ ಅವುಗಳನ್ನು ಕಬಳಿಸಲು ಪ್ರಯತ್ನಿಸುತ್ತಿದೆ ಎಂಬ ಆರೋಪದ ಮೇಲೆ ಬೆಳಗಾವಿಯಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಆಕ್ರೋಶಭರಿತ ಪ್ರತಿಭಟನೆ ನಡೆಸಿತು.

ಬಿಜೆಪಿ ಮುಖಂಡರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ,ಸರ್ಕಾರವು ರೈತರ, ಸಾಮಾನ್ಯ ಜನರ ಹಾಗೂ ದೇವಸ್ಥಾನಗಳ ಜಮೀನುಗಳನ್ನು ಕಬಳಿಸುವ ಕ್ರಮ ಕೈಗೊಂಡಿದೆ. ಈ ದುರಾಸೆಯನ್ನು ತಕ್ಷಣವೇ ನಿಲ್ಲಿಸಬೇಕು,ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಪಾಲ್ಗೊಂಡ ಕಾರ್ಯಕರ್ತರು ಹಾಗೂ ಮುಖಂಡರು ರಾಣಿ ಚೆನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

Read All News