ಮೈಸೂರು: ಕಾಂಗ್ರೆಸ್ ಗ್ಯಾರಂಟೀಗಳಲ್ಲಿ ಒಂದಾಗಿರುವ ಗೃಹ ಲಕ್ಷ್ಮಿ ಯೋಜನೆ ನಾಳೆ (30 ಆಗಸ್ಟ್) ಜಾರಿ ಮಾಡಲಿರುವ ಕಾಂಗ್ರೆಸ್ ಸರ್ಕಾರ ಮೈಸೂರನಲ್ಲಿ ಬಿಡುಬಿಟ್ಟಿದೆ.
ಇಂದು ಬೆಳ್ಳಂಬೆಳಿಗ್ಗೆ ತಾಯಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ದೌಡಾಯಿಸಿದ ಕಾಂಗ್ರೆಸ ಪಡೆ ಮುಖ್ಯಮಂತ್ರಿ ಸಿದ್ದರಾಮಯ್ಯ,ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ , ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ದೇವಿಯ ಆಶೀರ್ವಾದ ಪಡೆದಿದ್ದಾರೆ.
ಪ್ರತಿ ತಿಂಗಳು 2ಸಾವಿರ ರುಪಾಯೀ ಕೊಡುತ್ತೇವೆ ಎಂದು ಸಿಎಂ ಹೇಳಿದ್ದಾರೆ ಮತ್ತು ಗ್ರಾಂ ಪಂಚಾಯತಿ ಮಟ್ಟದಲ್ಲಿ ಕೂಡ ಈ ಕಾರ್ಯಕ್ರಮ ನಡೆಯುತ್ತೆ ಎಂದು ಸಿಎಂ ಹೇಳಿದ್ದಾರೆ.