ಬೆಳಗಾವಿ : ಬಿಜೆಪಿ ನಾಯಕ, ಮಾಜಿ ಶಾಸಕ ಸಂಜಯ ಪಾಟೀಲ ಹೇಳಿಕೆ ಖಂಡಿಸಿ ಅವರ ನಿವಾಸದ ಬಳಿ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ರಾತ್ರಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಮಾತನಾಡಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಗ್ರಾಮೀಣ ವಿಧಾನಸಭಾ ಮತಕ್ಷೇತ್ರದಲ್ಲಿ ಬಿಜೆಪಿಯಿಂದ ಆಯೋಜಿಸಲಾಗಿದ್ದ ಸಮಾವೇಶ ಉದ್ದೇಶಿಸಿ ಮಾತನಾಡಿದ ಸಂಜಯ ಪಾಟೀಲ್, ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ಮಹಿಳೆಯರುವುದು ನೋಡಿದರೆ ಅವರಿಗೆ ನಿದ್ದೆ ಬರುವುದಿಲ್ಲ. ಬಿಜೆಪಿ ಮಹಿಳೆಯರಿಗೆ ಗೌರವ, ರಕ್ಷಣೆ ಕೊಡುವ ಪಕ್ಷ ಬಿಜೆಪಿಯ ಮಾಜಿ ಶಾಸಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಹಗುರವಾಗಿ ಮಾತನಾಡಿರುವುದನ್ನು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಸಂಜಯ ಪಾಟೀಲ್ ಹೇಳಿಕೆಗೆ ತೀವ್ರವಾಗಿ ಖಂಡಿಸಿದ್ದಾರೆ.