ದೆಹಲಿ :ಅಬಕಾರಿ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪದ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ನಿನ್ನೆ ಬಂಧಿಸಿದ್ದ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ದೆಹಲಿ ನ್ಯಾಯಾಲಯವು ಸೋಮವಾರ ಮಾರ್ಚ್ 4 ರವರೆಗೆ ಸಿಬಿಐ ಕಸ್ಟಡಿಗೆ ಒಪ್ಪಿಸಿದೆ.
ಸಿಸೋಡಿಯಾರವರನ್ನು ಇಂದು ದೆಹಲಿಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ದೆಹಲಿಯ ಅಬಕಾರಿ ನೀತಿ ಪ್ರಕರಣದಲ್ಲಿ ಭ್ರಷ್ಟಾಚಾರ ಆರೋಪದ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳದಿಂದ ಅವರನ್ನು ಬಂಧಿಸಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ.