ಬೆಂಗಳೂರು:ಕರ್ನಾಟಕ ಸರ್ಕಾರವು ಕೋವಿಡ್-19 ಸಾಂಕ್ರಾಮಿಕದ ಅವಧಿಯಲ್ಲಿ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ನಡೆದ ಬಹುಕೋಟಿ ಹಗರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲು ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಣಯ ಕೈಗೊಳ್ಳಲಾಯಿತು. ಈ ನಿರ್ಧಾರ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಡಿ ಕುನ್ನಾ ರವರ ನೇತೃತ್ವದಲ್ಲಿ ನಡೆದ ವಿಚಾರಣಾ ಆಯೋಗದ ಮಧ್ಯಂತರ ವರದಿಯ ಆಧಾರದಲ್ಲಿ ಆಗಿದೆ.
ವರದಿಯಲ್ಲಿ ಬೃಹತ್ ಪ್ರಮಾಣದ ಅವ್ಯವಹಾರಗಳು ನಡೆದಿರುವುದಾಗಿ ಉಲ್ಲೇಖಿಸಿಲಾಗಿದೆ ಮತ್ತು ಇನ್ನಷ್ಟು ತನಿಖೆ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಶಿಫಾರಸು ಮಾಡಲಾಗಿದೆ. ಇದರ ಹಿನ್ನೆಲೆಯಲ್ಲಿ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಒಂದು ಸಚಿವ ಸಂಪುಟ ಉಪಸಮಿತಿಯನ್ನು ಕೂಡ ರಚಿಸಲಾಗಿದೆ.
ಈ ಉಪಸಮಿತಿಯ ಸದಸ್ಯರು:1.ಡಾ. ಜಿ. ಪರಮೇಶ್ವರ – ಗೃಹ ಸಚಿವರು
2.ಎಚ್.ಕೆ. ಪಾಟೀಲ – ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು
3.ದಿನೇಶ್ ಗುಂಡೂರಾವ್ – ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
4.ಪ್ರಿಯಾಂಕ್ ಖರ್ಗೆ – ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರು
5.ಸಂತೋಷ್ ಲಾಡ್ – ಕಾರ್ಮಿಕ ಸಚಿವರು
6.ಶರಣ ಪ್ರಕಾಶ್ ಪಾಟೀಲ – ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು
ಈ ಸಮಿತಿಗೆ ಹಗರಣದ ಕುರಿತು ಪರಿಶೀಲನೆ ನಡೆಸಿ, ಕಾನೂನು ಕ್ರಮ ಕೈಗೊಳ್ಳುವ ಕಾರ್ಯವಿಮರ್ಶೆ ಮಾಡಲಾಗಿದೆ. ಸರ್ಕಾರವು ಈ ಹಗರಣದ ಸಂಬಂಧಿತ ಅವ್ಯವಹಾರಗಳನ್ನು ಗಂಭೀರವಾಗಿ ಪರಿಗಣಿಸಿ, ಎಲ್ಲಾ ಸಂಬಂಧಿಸಿದವರ ಮೇಲೆ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಸಿದ್ಧತೆ ಮಾಡಿಕೊಳ್ಳುತ್ತಿದೆ.