ಬೆಳಗಾವಿ : ದಂಡುಮಂಡಳಿ ಸಿಇಒ ಕೆ.ಆನಂದ ಅವರು ಯಾವುದೋ ಕಾರಣಕ್ಕೆ ಆತ್ಮ ಹತ್ಯೆ ಮಾಡಿಕೊಂಡಿರಬಹುದು ಎಫ್ಎಸ್ಎಲ್ ವರದಿ ಬಂದ ಬಳಿಕ ಖಚಿತ ಮಾಹಿತಿ ತಿಳಿದು ಬರಲಿದೆ ಎಂದು ನಗರ ಪೊಲೀಸ್ ಆಯುಕ್ತ ಎಸ್.ಎನ್.ಸಿದ್ದರಾಮಪ್ಪ ತಿಳಿಸಿದರು.
ಶನಿವಾರ ದಂಡುಮಂಡಳಿ ಸಿಇಒ ಕೆ.ಆನಂದ ಸರಕಾರಿ ನಿವಾಸಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. 2021 ರಿಂದ ಬೆಳಗಾವಿ ದಂಡುಮಂಡಳಿ ಸಿಇಒ ಆಗಿ ಕೆಲಸ ಮಾಡುತ್ತಿದ್ದರು. ಮೇಲ್ನೋಟಕ್ಕೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ದೇಹವನ್ನು ಪರೀಕ್ಷೆ ಮಾಡಿದ ಬಳಿಕ ಖಚಿತ ಮಾಹಿತಿ ತಿಳಿದು ಬರಲಿದೆ ಎಂದರು.