ಚಿಕ್ಕೋಡಿ : ಮಹಾರಾಷ್ಟ್ರ ರಾಜ್ಯದ ಘಟ್ಟ ಪ್ರದೇಶಗಳಲ್ಲಿ ಸತತವಾಗಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನಲೆಯಲ್ಲಿ, ಕೃಷ್ಣಾ ನದಿಯ ನೀರಿನ ಒಳ ಹರಿವು ಹೆಚ್ಚುತ್ತಿರುವ ಕಾರಣಕ್ಕೆ ಮಹಾರಾಷ್ಟ್ರದ ಪ್ರಸಿದ್ಧ,
ಪಂಚಗಂಗಾ ಹಾಗೂ ಕೃಷ್ಣಾ ನದಿಗಳ ಸಂಗಮ ಕ್ಷೇತ್ರವಾದ ನರಸಿಂಹವಾಡಿಯ ದತ್ತಾತ್ರೇಯ ದೇವಸ್ಥಾನವು ಮುಳುಗಡೆಯಾಗಿದೆ.
ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಶಿರೋಳ ತಾಲೂಕಿನ ನರಸಿಂಹವಾಡಿಯ ದತ್ತ ಮಂದಿರದಲ್ಲಿ ನೀರಿನಲ್ಲೆ ಬಂದು ಭಕ್ತರು ದೇವರ ದರ್ಶನ ಪಡೆಯುತ್ತಿದ್ದಾರೆ.
ನಿತ್ಯ ಸಾವಿರಾರು ಭಕ್ತರು ಆಗಮಿಸುವ ಹಾಗೂ ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿಯಲ್ಲಿರುವ ಪ್ರಸಿದ್ದವಾದ ದೇವಸ್ಥಾನ ಇದಾಗಿದೆ.
ಕೃಷ್ಣಾ ನದಿ ಮೂಲಕ ರಾಜ್ಯಕ್ಕೆ ಒಟ್ಟು 75 ಸಾವಿರ ಕ್ಯೂಸೇಕ್ ನಷ್ಟು ನೀರು ಬಿಡುಗಡೆ ಮಾಡಲಾಗುತ್ತಿದೆ.