ಸಾರಿಗೆ ಬಸ್ ನಲ್ಲಿ ಜನತಾ ದರ್ಶನಕ್ಕೆ ತೆರಳಿದ ಡಿಸಿ

  • Shivaraj Bandigi
  • 15 Jan 2024 , 3:52 AM
  • Belagavi
  • 238

ಬೆಳಗಾವಿ : ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ ಸ್ಥಳೀಯವಾಗಿಯೇ ಸಮಸ್ಯೆಗಳನ್ನು ಪರಿಹರಿಸಲು ಅನುಕೂಲವಾಗುವಂತೆ ಖಾನಾಪುರ ತಾಲ್ಲೂಕಿನ ನಂದಗಡದಲ್ಲಿ ಇಂದು ಹಮ್ಮಿಕೊಳ್ಳಲಾಗಿರುವ "ಜನತಾ ದರ್ಶನ" ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ತಂಡವು ಸಾರಿಗೆ ಸಂಸ್ಥೆಯ ಬಸ್ ನಲ್ಲಿ ನಂದಗಡಕ್ಕೆ ತೆರಳಿತು. 

ಮಹಿಳಾ ಅಧಿಕಾರಿಗಳು ಶಕ್ತಿ ಯೋಜನೆಯಡಿ ಉಚಿತವಾಗಿ ಪ್ರಯಾಣಿಸಿದರೆ ಜಿಲ್ಲಾಧಿಕಾರಿಗಳು ಸೇರಿದಂತೆ ಇತರೆ ಅಧಿಕಾರಿಗಳು ಟಿಕೆಟ್ ಪಡೆದುಕೊಂಡು ತೆರಳಿದರು.
ಅಪರ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ ಮತ್ತಿತರರು ಉಪಸ್ಥಿತರಿದ್ದರು.

Read All News