ವಿವಿಧ ಬೇಡಿಕೆ‌ ಈಡೇರಿಕೆಗೆ ಕಟ್ಟಡ ಕಾರ್ಮಿಕರ ಆಗ್ರಹ

  • 14 Jan 2024 , 11:52 PM
  • Belagavi
  • 133

ಬೆಳಗಾವಿ: ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಶುಕ್ರವಾರ ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ‌ ಸಂಘ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಸಿಎಂಗೆ ಮನವಿ ರವಾನಿಸಿದರು. ಕಟ್ಟಡ ಕಾರ್ಮಿಕರ ಮಕ್ಕಳು ಕಾಲೇಜು ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗೆ ತಕ್ಷಣವೇ ಲ್ಯಾಪ್‌ಟಾಪ್ ಗಳನ್ನು ವಿತರಿಸಬೇಕು. ಕಾರ್ಮಿಕ ಸೇವಾ ಕೇಂದ್ರಗಳನ್ನು ಮರ ಆರಂಭಿಸಬೇಕು. ವಿದ್ಯಾರ್ಥಿಗಳಿಗೆ ಸಿಗುವ ಶಿಷ್ಯ ವೇತನ ನೀಡಬೇಕೆಂದು ಒತ್ತಾಯಿಸಿದರು.

ಕಾರ್ಮಿಕರಿಗೆ ಎಲ್ಲ ತರಹದ ಕಿಟ್‌ಗಳ ಬದಲಾಗಿ ಅವುಗಳಗೆ ತಗಲುವ ಖರ್ಚು ಹಾಗೂ ವೆಚ್ಚಗಳ ಹಣವನ್ನು ಕಾಮಿಕರ ಖಾತೆಗೆ ನೇರವಾಗಿ ವರ್ಗಾವಣೆ ಮಾಡಬೇಕು.ಕಾರ್ಮಿಕರಿಗಾಗಿ ಇರುವ ವರದಿ ಯೋಜನೆಯ ಅನುಷ್ಠಾನಗೊಳಿಸಬೇಕೆಂದು ಆಗ್ರಹಿಸಿದರು.

ಕಾರ್ಮಿಕರಿಗೆ ನೀಡುವ ಪಿಂಚಣಿ ಯೋಜನೆಯ ನಿಯಮಗಳನ್ನು ಸರಕರಿಸಿ 5ಡಿ ವರ' ಜೊಲಿಸಿದ ಕಾರ್ಮಿಕರಿಗೆ ಪಿಂಚಣಿ ನೀಡಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಮನವಿಯಲ್ಲಿ ಎಚ್ಚರಿಸಿದ್ದಾರೆ.

ಎನ್‌.ಆರ್.ಲಾತೂರು, ಪರಸಪ್ಪ ಕಾಂಬಳೆ, ಸಾಗರ ತೇರದಾಳ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Read All News