ನನ್ನ ಆರೋಗ್ಯದ ಬಗ್ಗೆ ಹರಿದಾಡುತ್ತಿರುವ ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ: ಉಪಸಭಾಪತಿ ಆನಂದ ಮಾಮನಿ

  • 15 Jan 2024 , 6:34 AM
  • Belagavi
  • 179

ಬೆಳಗಾವಿ : ಮನುಷ್ಯನಿಗೆ ಜೀವನದಲ್ಲಿ ಸ್ವಾಭಾವಿಕವಾಗಿ ಆರೋಗ್ಯದಲ್ಲಿ ಏರಿಳಿತ ಸಹಜ.ಕೆಲವು ವರ್ಷಗಳಿಂದ ನನಗೆ ಮಧುಮೇಹ ಖಾಯಿಲೆ ಇದೆ. ಅದರ ಜೊತೆಗೆ ಬೇರೆ ಬೇರೆ ಕಾರಣ ಹೇಳಿ ಸುಳ್ಳು ವದಂತಿ ಕೆಲ ಮಾಧ್ಯಮಗಳಲ್ಲಿ ಬರ್ತಿದೆ ಎಂದು ವಿಧಾನ ಸಭಾ ಉಪ ಸಭಾಪತಿ ಆನಂದ ಮಾಮನಿ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ವಿಡಿಯೋ ಬಿಡುಗಡೆ ಮಾಡಿರುವ ಅವರು, ಮನೆ ದೇವರಾದ ಜಾಲಿಕಟ್ಟಿ ಬಸವಣ್ಣ, ತಂದೆ-ತಾಯಿ, ರಾಜ್ಯದ ಜನರ ಆಶೀರ್ವಾದ ಇದೆ. ಸುಳ್ಳು ವಂದತಿಗೆ ನಮ್ಮ ಕಾರ್ಯಕರ್ತರು ಕಿವಿಗೊಡಬೇಡಿ.ನನ್ನ ಕುಟುಂಬ ಸದಸ್ಯರು ನನ್ನ ಬೆನ್ನಿಗೆ ನಿಂತಿದ್ದಾರೆ.ನಿಮ್ಮೆಲ್ಲರ ಆಶೀರ್ವಾದ, ಮಾಧ್ಯಮ ಸ್ನೇಹಿತರ ಸಹಕಾರ ಇದೆ. ಸಿಎಂ ಬಸವರಾಜ್ ಬೊಮ್ಮಾಯಿ ದೂರವಾಣಿ ಮೂಲಕ ಆರೋಗ್ಯ ವಿಚಾರಿಸಿದ್ದಾರೆ. ಯಾವುದೇ ಕಾರಣಕ್ಕೂ ಧೈರ್ಯಗೆಡುವ ಪ್ರಶ್ನೆಯೇ ಇಲ್ಲ. ನಾವೆಲ್ಲರೂ ನಿಮ್ಮ ಬೆನ್ನಿಗಿದ್ದೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಅಲ್ಲದೆ, ಮಾಜಿ ಸಿಎಂ ಬಿಎಸ್‌ವೈ ಸೇರಿದಂತೆ ಅನೇಕ ಶಾಸಕರು ನನಗೆ ಸಲಹೆ ಕೊಟ್ಟಿದ್ದಾರೆ. ಆ ನಿಟ್ಟಿನಲ್ಲಿ ನಾನು ಧೈರ್ಯವಾಗಿ ಬಂದು ತಮ್ಮೆಲ್ಲರ ಸೇವೆಗೆ ಮತ್ತೆ ಅಣಿಯಾಗುತ್ತೇನೆ. ನಾನು ಚೆನ್ನೈನಲ್ಲಿರುವ ಕಾರಣಕ್ಕೆ ಚಿಂತಾಜನಕ, ಶಿಫ್ಟ್ ಮಾಡ್ತಾರೆ ಅನ್ನೋದು ಯಾವುದು ಇಲ್ಲ. ಚೆನ್ನೈ ಆಸ್ಪತ್ರೆಗೆ ದೊಡ್ಡ ವೈದ್ಯರು ಬಂದ ಬಳಿಕ ತಪಾಸಣೆ ಮಾಡಿಸಿ ಔಷಧಿ ತೆಗೆದುಕೊಂಡು ಬರುವೆ. ಆದಷ್ಟು ಬೇಗ ರಾಜಧಾನಿಗೆ ಬಂದು ತಮ್ಮ ಸಂಪರ್ಕಕ್ಕೆ ಸಿಗುತ್ತೇನೆ ಎಂದಿದ್ದಾರೆ.

Read All News