ಫಡ್ನವಿಸ್ ಕನಸು ನನಸಾಗುವುದಿಲ್ಲ : ಬೊಮ್ಮಾಯಿ

  • 15 Jan 2024 , 1:59 AM
  • Bengaluru
  • 137

ಕರ್ನಾಟಕ ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇದ್ರ ಫಡ್ನವಿಸ್ ಅವರು ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಅವರ ಕನಸು ಎಂದೂ ನನಸಾಗುವುದಿಲ್ಲ. ನಾಡಿನ ನೆಲ, ಜಲ, ಗಡಿ ರಕ್ಷಣೆ ವಿಚಾರದಲ್ಲಿ ನಮ್ಮ ಸರ್ಕಾರ ಕಟಿ ಬದ್ಧವಾಗಿದೆ


ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಒಂದಿಂಚೂ ಜಾಗವನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ. ಮಹಾರಾಷ್ಟ್ರದಲ್ಲಿರುವ ಕನ್ನಡ ಭಾಷಿಕ ಪ್ರದೇಶಗಳಾದ‌ ಸೊಲ್ಲಾಪುರ, ಅಕ್ಕಲಕೋಟೆ ಕರ್ನಾಟಕಕ್ಕೆ ಸೇರಬೇಕೆನ್ನುವುದು ನಮ್ಮ ಆಗ್ರಹವಿದೆ.

ಮಹಾರಾಷ್ಟ್ರ ಸರ್ಕಾರ 2004 ರಿಂದಲೂ ಎರಡೂ ರಾಜ್ಯಗಳ ಗಡಿ ವಿಚಾರದಲ್ಲಿ ಕ್ಯಾತೆ ತೆಗೆದು ಸುಪ್ರೀಂ ಕೋರ್ಟ್ ನಲ್ಲಿ ದಾವೆ ಹೂಡಿದೆ. ಇದುವರೆಗೂ ಯಶಸ್ವಿಯಾಗಿಲ್ಲ. ಮುಂದೆಯೂ ಆಗುವುದಿಲ್ಲ. ನಾವು ನಮ್ಮ ಕಾನೂನು ಹೋರಾಟವನ್ನು ಪ್ರಬಲವಾಗಿ ಮಾಡಲು ಸನ್ನದ್ದರಾಗಿದ್ದೇವೆ ಎಂದು ಸಿ ಎಂ ಬೊಮ್ಮಾಯಿ ಹೇಳಿದ್ದಾರೆ.

Read All News