ಬೆಂಗಳೂರು: ರಾಜ್ಯದ ವಿವಿದೆಡೆ ಕಳೆದ ಕೆಲ ದಿನಗಳಿಂದ ಸುರಿಯುತ್ತಿರೋ ಧಾರಾಕಾರ ಮಳೆ ಮುಂದಿನ ವಾರವೂ ಮುಂದುವರಿಯಲಿದೆ. ಭಾರತೀಯ ಹವಾಮಾನ ಇಲಾಖೆ ಈ ಬಗ್ಗೆ ಮಹತ್ವದ ಮುನ್ಸೂಚನೆ ನೀಡಿದೆ. ಅದರಲ್ಲೂ ಬೆಂಗಳೂರಿನಲ್ಲೂ ಸಹ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಹೀಗಾಗಿ ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕುಗೊಂಡಿದೆ. ಮುಂಗಾರುಕ್ಕೂ ಮುನ್ನವೇ ಮಳೆಯಾಗುತ್ತಿದ್ದು, ರೈತರಲ್ಲಿ ಸಂತಸ ಮನೆ ಮಾಡಿದೆ. ಗುಡುಗು, ಮಿಂಚು ಸಹಿತ ಮಳೆಯಾಗುವ ಸಂಭವ ಇದ್ದು ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.