ಬೆಳಗಾವಿ: ಕೇಂದ್ರ ಸರಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳನ್ನು ರಾಜ್ಯ ಸರಕಾರ ಹಿಂಪಡೆಯುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನೇಗಿಲ ಯೋಗಿ ರೈತ ಸೇವಾ ಸಂಘ ಗುರುವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ರಾಜ್ಯಾದ್ಯಂತ ಅರಣ್ಯ ಭೂಮಿ ಹಾಗೂ ಬಗರ ಹುಕಂ ಸಾಗುವಳಿದಾರರು ಸುಮಾರು ವರ್ಷಗಳಿಂದ ಉಳಿಮೆ ಮಾಡುತ್ತಿರುವ ಲಕ್ಷಾಂತರ ಕುಟುಂಬಗಳ ಅರ್ಹ ರೈತರಿಗೆ ಹಕ್ಕು ಪತ್ರ ಹಾಗೂ ಇನ್ನಿತರ ನಿಯಮಗಳನ್ನು ಸರಿಪಡಿಸಿ ರೈತರಿಗೆ ಪಟ್ಟಾ ನೀಡಬೇಕು.
ರಾಜ್ಯ ಸರಕಾರ ಗೋಮಾಳ ಜಮೀನನ್ನು ಉದ್ಯಮಿಗಳಿಗೆ ಮತ್ತು ಸಂಘ ಸಂಸ್ಥೆಗಳಿಗೆ ಹಂಚಿಕೆ ಮಾಡಿರುವ ನಿಯಮವನ್ನು ತತಕ್ಷಣ ಕೈಬಿಟ್ಟು ಬ ಕರಾಬ ಜಮೀನನ್ನು ರದ್ದು ಮಾಡಬೇಕೆಂದು ಒತ್ತಾಯಿಸಿದ್ದಾರೆ.