ಸಿಂದಗಿ :ಹಿಂದೂ ಹುಲಿ ಎಂದೇ ಖ್ಯಾತಿಯಾಗಿರುವ ನೇರ ನುಡಿಯ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡಬೇಕು ಎಂದು ಪಂಚಮಸಾಲಿ ಸಮಾಜದ ಮುಖಂಡರಾದ ಸಿದ್ದನಗೌಡ ಪಾಟೀಲ್ (ಅಲ್ಲಾಪುರ ) ರವರು ಬಿಜೆಪಿ ಪಕ್ಷದ ವರಿಷ್ಠರಿಗೆ ಆಗ್ರಹಿಸಿದ್ದಾರೆ ಬಸನಗೌಡ ಪಾಟೀಲ್ ಯತ್ನಾಳ ರವರು ಎರಡು ಸಲ ಶಾಸಕರಾಗಿ ಸಂಸದರಾಗಿ ವಿಧಾನ ಪರಿಷತ್ ಸದಸ್ಯರಾಗಿ ಹಾಗೂ ಕೇಂದ್ರ ಸಚಿವರಾಗಿ ಅಪಾರ ರಾಜಕೀಯ ಅನುಭವ ಹೊಂದಿದವರಾಗಿದ್ದು ಅವರ ಅನುಭವವನ್ನು ಬಿಜೆಪಿ ಪಕ್ಷದ ವರಿಷ್ಠರು ಸಾಮರ್ಥ್ಯವಾಗಿ ಬಳಸಿಕೊಳ್ಳಲು ಅವರನ್ನು ವಿರೋಧ ಪಕ್ಷದ ನಾಯಕರಾಗಿ ಮಾಡಬೇಕು ಎಂದು ಪಂಚಮಸಾಲಿ ಸಮಾಜದ ಮುಖಂಡರಾದ ಸಿದ್ದನಗೌಡ ಪಾಟೀಲ್ (ಅಲ್ಲಾಪುರ) ಒತ್ತಾಯಿಸಿದರು.