ಡಿಕೆಶಿ ವಿರುದ್ಧ ಹರಿಹಾಯ್ದ ಮಾಜಿ ಸಚಿವ ರಮೇಶ

  • Shivaraj Bandigi
  • 14 Jan 2024 , 3:54 PM
  • Belagavi
  • 307

ಬೆಳಗಾವಿ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಬೆಂಗಳೂರಿನಲ್ಲಿರುವ ನನ್ನ ನಿವಾಸಕ್ಕೆ ಗುಂಡಾಗಳನ್ನು ಕಳುಹಿಸಿ ದಬ್ಬಾಳಿಕೆ ಮಾಡಿದ್ದಾನೆ.‌ ಅವರು ಕಾಂಗ್ರೆಸ್ ಕಾರ್ಯಕರ್ತರಲ್ಲ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ವಾಗ್ದಾಳಿ ನಡೆಸಿದರು.

ಮಂಗಳವಾರ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕೊತ್ವಾಲ್ ರಾಮಚಂದ್ರನ ಶಿಷ್ಯನಾಗಿ ರಾಜ್ಯದ ಜನರಿಗೆ ತೋರಿಸಿ ಕೊಟ್ಟಿದ್ದಾನೆ. ಈಗಾಗಲೇ ನನ್ನ ಮನೆಯ ಮೇಲೆ ಡಿ.ಕೆ.ಶಿವಕುಮಾರ ಮೇಲೆ ಗೋಕಾಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ ಎಂದರು.

ನನ್ನ ಸಿಡಿ ಪ್ರಕರಣವನ್ನು ಸಿಬಿಐ ತನಿಖೆ ನಡೆಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈಗಾಗಲೇ ಇ- ಮೇಲ್ ಮಾಡಿದ್ದೇನೆ ಎಂದರು.

ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ದಾಖಲಾತಿ ನೀಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ನನ್ನ ಸಿಡಿ ಪ್ರಕರಣದ ಹಿಂದೆ ಡಿ.ಕೆ.ಶಿವಕುಮಾರ, ವಿಷ ಕನ್ಯೆ ಹಾಗೂ ಇನ್ನೊಬ್ಬ ವ್ಯಕ್ತಿ ಇದ್ದಾನೆ. ಇದು ಸಮಗ್ರ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.

ನನ್ನ ಹನಿಟ್ರ್ಯಾಪ್ ಮಾಡಿಸಲು ನರಸಿಂಹಮೂರ್ತಿ ಎಂಬುವರನ್ನು ಡಿ.ಕೆ.ಶಿವಕುಮಾರ ಕರೆಸಿದ್ದ ಅವನನ್ನು ಇಲ್ಲಿಯವರೆಗೂ ಕರೆದು ವಿಚಾರಣೆ ನಡೆಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Read All News