ಮಾಜಿ ಲೋಕೋಪಯೋಗಿ ಸಚಿವ ಶಿವಾನಂದ ಕೌಜಲಗಿ ನಿಧನ

  • Shivaraj
  • 30 Oct 2026 , 3:36 PM
  • Bailhongal
  • 30

ಬೈಲಹೊಂಗಲ:

ವಿಧಾನಸಭಾ ಮತಕ್ಷೇತ್ರದ ಶಾಸಕ ಮಹಾಂತೇಶ ಕೌಜಲಗಿ ಅವರ ತಂದೆ, ಮಾಜಿ ಲೋಕೋಪಯೋಗಿ ಸಚಿವ, ಕೆಎಲ್ ಇ ಸಂಸ್ಥೆಯ ಮಾಜಿ ಅಧ್ಯಕ್ಷ ಶಿವಾನಂದ ಕೌಜಲಗಿ ಅವರು ಇಂದು ಬೆಳಗ್ಗೆ ನಿಧನರಾದರು. ಜನತಾದಳದ ಹಿರಿಯ ಮುತ್ಸದ್ದಿ ರಾಜಕಾರಣಿಯಾದ ಇವರು ಸತತವಾಗಿ ಮೂರು ಬಾರಿ ಬೈಲಹೊಂಗಲ ವಿಧಾಸಭೆಯನ್ನು ಪ್ರತಿನಿಸಿಧಿಸಿದ್ದರು ಸನ್ 1994 ರ ಜನತಾದಳ ಸರ್ಕಾರದಲ್ಲಿ ಲೋಕೋಪಯೋಗಿ ಇಲಾಖೆಯ ಸಚಿವರಾಗಿ ಹಲವಾರು ಮಹತ್ತರ ಯೋಜನೆಗಳನ್ನು ಜಾರಿಗೆ ತಂದಿದ್ದರು. ಅಲ್ಲದೆ ಬೆಳಗಾವಿ ಪ್ರತಿಷ್ಠಿತ ಕೆಎಲ್ ಇ ಸಂಸ್ಥೆಯ ಅಧ್ಯಕ್ಷರಾಗಿ ಸೇವೆ ಸಲ್ಲಿದ್ದರು. ಸಾಮಾಜಿಕ, ಶೈಕ್ಷಣಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದ ಇವರು ಬೆಳಗಾವಿ ಲೋಕಸಭಾ ಸದಸ್ಯರಾಗಿಯೂ ಕೂಡಾ ಕಾರ್ಯ ನಿರ್ವಹಿಸಿದ್ದರು. ಇವರ ಶೈಕ್ಷಣಿಕ ಸೇವೆಯನ್ನು ಪರಿಗಣಿಸಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿತ್ತು. ಲಿಂಗಾಯತ ಸಮುದಾಯದ ಪ್ರಭಲ ವ್ಯಕ್ತಿಯಾಗಿದ್ದ ಇವರು ಹಲವಾರು ಮಠ ಮಂದಿರದ ಸೇವೆ ಸಲ್ಲಿಸಿದ್ದರು. ಮೃತರಿಗೆ ಪತ್ನಿ, ಪುತ್ರಿ, ಶಾಸಕ ಮಹಾಂತೇಶ ಕೌಜಲಗಿ ಹಾಗೂ ಮುಖಂಡ ಬಸವರಾಜ ಕೌಜಲಗಿ ಸೇರಿದಂತೆ ಕುಟುಂಬದ ಸದಸ್ಯರನ್ನು ಹೊಂದಿದ್ದರು. ಇವರ ನಿಧನಕ್ಕೆ ವಿವಿದ ಮಠಾದೀಶರು, ರಾಜಕೀಯ ಗಣ್ಯರು, ಅಭಿಮಾನಿಗಳು ಸಾಂತ್ವನ ವ್ಯಕ್ತಪಡಿಸಿದ್ದಾರೆ.

ವರದಿಗಾರ : ರವಿಕಿರಣ ಯಾತಗೇರಿ

Read All News