ಮುಂಬೈ :ಟಾಟಾ ಗ್ರೂಪ್‌ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ54 ಮುಂಬೈ ಸಮೀಪದ ಪಾಲ್ಘರ್‌ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಟಾಟಾ ಸನ್ಸ್‌ನ ಅಧ್ಯಕ್ಷರಾಗಿ ರತನ್ ಟಾಟಾರವರ ಉತ್ತರಾಧಿಕಾರಿಯಾಗಿದ್ದರು.
ಚಾಲಕನ ನಿಯಂತ್ರಣ ತಪ್ಪಿದ ವಾಹನ ಚರೋಟಿ ಬಳಿ ನದಿಯ ಮೇಲಿನ ಸೇತುವೆಯ ಮೇಲೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರಣ ಅಪಘಾತ ಉಂಟಾಗಿದೆ ಎಂದು ತಿಳಿದು ಬಂದಿದೆ ಮತ್ತು ಮಿಸ್ತ್ರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ .