ಖಾದಿ ಮತ್ತು ಗ್ರಾಮೋದ್ಯೋಗ ಮಳಿಗೆಯಲ್ಲಿ ಗಾಂಧಿ, ಶಾಸ್ತ್ರಿ ಜಯಂತಿ

  • 15 Jan 2024 , 1:07 AM
  • Belagavi
  • 153

ಬೆಳಗಾವಿ : ಇಲ್ಲಿನ ಕಿರ್ಲೋಸ್ಕರ್ ರಸ್ತೆಯ ಖಾದಿ ಮತ್ತು ಗ್ರಾಮೋದ್ಯೋಗ ಮಳಿಗೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹಾದೂರ್ ಶಾಸ್ತ್ರಿ ಅವರ ಜನ್ಮ ದಿನವನ್ನು ರವಿವಾರ ಸಂಭ್ರಮದಿಂದ ಆಚರಿಸಲಾಯಿತು.

ಬೆಳಗಾವಿ ಸಂಸದೆ ಮಂಗಲಾ ಅಂಗಡಿ ಅವರು ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿ, ಬಿಜೆಪಿ ದೇಶೀಯ ವಸ್ತುಗಳ ಉಪಯೋಗಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಅದರಲ್ಲೂ ಪ್ರಧಾನಿ ನರೇಂದ್ರ ಮೋದಿ ಅವರು ಆತ್ಮ ನಿರ್ಭರ ಭಾರತಕ್ಕೆ ಕರೆ ಕೊಡುವ ಮೂಲಕ ಸ್ಥಳೀಯ ವಸ್ತುಗಳಿಗೆ ಉತ್ತೇಜನ ನೀಡಿದ್ದಾರೆ.

ಪ್ರತಿಯೊಬ್ಬರೂ ಖಾದಿ ವಸ್ತುಗಳನ್ನು ಖರೀದಿಸುವ ಮೂಲಕ ಈ ಉತ್ಪನ್ನಗಳಿಗೆ ಪ್ರೋತ್ಸಾಹ ನೀಡಬೇಕು ಎಂದು ತಿಳಿಸಿದರು.
ಶಾಸಕ ಅನಿಲ್ ಬೆನಕೆ ಮಾತನಾಡಿ, ಖಾದಿ ಭಾರತದ ಸ್ವದೇಶಿ ವಸ್ತು ಆಗಿದೆ. ಪ್ರತಿಯೊಬ್ಬರೂ ಅದನ್ನು ಖರೀದಿ ಮಾಡುವ ಮೂಲಕ ದೇಶೀಯತೆಗೆ ಉತ್ತೇಜನ ನೀಡಬೇಕು ಎಂದು ಹೇಳಿದರು.
ಮಾಜಿ ಶಾಸಕ ಸಂಜಯ ಪಾಟೀಲ,
ಬಿಜೆಪಿ ಮಹಾನಗರ ಘಟಕದ ಉಪಾಧ್ಯಕ್ಷ ರುದ್ರಣ್ಣ ಚಂದರಗಿ,
ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮುರುಗೇಂದ್ರ ಗೌಡ ಪಾಟೀಲ, ದಾದಾಗೌಡ ಬಿರಾದಾರ, ಉಪಾಧ್ಯಕ್ಷೆ ಮಹಾದೇವಿ ಹಿರೇಮಠ, ನಗರಸೇವಕ ಶ್ರೇಯಸ ನಾಕಾಡಿ, ಶಿಲ್ಪಾ ಕೆಕರೆ, ಕೇದಾರ ಜೋರಾಪುರ, ಇಂದ್ರ ಬಾಳಿಕಾಯಿ, ಹನುಮಂತ ಕಾಗಲಕರ, ಶರದ ಪಾಟೀಲ, ವಿನಯ್ ಲಂಗೋಟಿ, ಪ್ರಸಾದ ದೇವರಮನಿ, ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Read All News